ಮಂಗಳೂರು: ಕೆಫೆ ಕಾಫಿ ಡೇ ಮಾಲೀಕ ಹಾಗೂ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಅಳಿಯ ವಿ.ಜಿ. ಸಿದ್ಧಾರ್ಥ್ ಅವರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಫೋರೆನ್ಸಿಕ್ ಲ್ಯಾಬ್ ರಿಪೋರ್ಟ್ ಪೊಲೀಸರ ಕೈ ಸೇರಿದೆ.
ಮಂಗಳೂರು ಪೊಲೀಸ್ ಕಮಿಷನರ್ ಡಾ. ಪಿ.ಎಸ್. ಹರ್ಷ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಫೋರೆನ್ಸಿಕ್ ಲ್ಯಾಬ್ನಿಂದ ದೊರೆತಿರುವ ರಿಪೋರ್ಟ್ ಅನ್ನು ವೆನ್ಲಾಕ್ ಅಧೀಕ್ಷಕರಿಗೆ ಹಸ್ತಾಂತರಿಸಲಾಗಿದೆ. ಅದರ ಆಧಾರದ ಮೇಲೆ ಅಧೀಕ್ಷಕರು ಪೂರ್ಣ ಪ್ರಮಾಣದ ವರದಿಯನ್ನು ನೀಡುತ್ತಾರೆ. ವರದಿಯಲ್ಲಿ ಏನಿದೆ ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಸಿದ್ದಾರ್ಥ್ ಅವರು ಜುಲೈ 29ರಂದು ಮಂಗಳೂರಿನ ಉಳ್ಳಾಲ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.