ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳದ ಮಹಿಳೆಯೊಬ್ಬರು ಅನಾರೋಗ್ಯದಿಂದ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿಗಾಗಿ ನಿರೀಕ್ಷಿಸಲಾಗುತ್ತಿದೆ.
ಬಂಟ್ವಾಳ ಪೇಟೆಯ ನಿವಾಸಿಯೊಬ್ಬರು ಕೆಲ ದಿನಗಳ ಹಿಂದೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದು, ಇದೀಗ ಅವರ ಶವವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿರಿಸಲಾಗಿದೆ. ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಗಾಗಿ ನಿರೀಕ್ಷಿಸಲಾಗುತ್ತಿದೆ.