ಸುಳ್ಯ(ದಕ್ಷಿಣ ಕನ್ನಡ) : ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯಧನದ ಚೆಕ್ ಹಸ್ತಾಂತರಿಸಿದರು. ಪ್ರವೀಣ್ ಅವರ ಪತ್ನಿ ಹಾಗೂ ತಂದೆ-ತಾಯಿಯ ಜೊತೆಗೆ ಮಾತನಾಡಿ ಧೈರ್ಯ ತುಂಬಿದರು.
ನಂತರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ಹಿಂದೆ ಹಲವು ಕೊಲೆಗಳು ನಡೆದಾಗ ಕಠಿಣ ಕ್ರಮ ಕೈಗೊಳ್ಳುವಲ್ಲಿ ನಮ್ಮ ಸರ್ಕಾರ ಎಡವಿದೆ ಎಂದು ಪ್ರಾಮಾಣಿಕವಾಗಿ ಹೇಳುತ್ತೇನೆ. ಪೊಲೀಸರಿಗೆ ಪ್ರವೀಣ್ ಅವರು ತನಗೆ ಬೆದರಿಕೆ ಇರುವ ಬಗ್ಗೆ ಹೇಳಿದ್ದಾರೆ ಎನ್ನಲಾಗ್ತಿದೆ. ಅದು ನಿಜವೇ ಆಗಿದ್ದರೆ ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿತ್ತು ಎಂದರು.
ಆರೋಪಿಗಳು ರಾಜ್ಯದ ಹಾಗೂ ದೇಶದ ಯಾವುದೇ ಮೂಲೆಯಲ್ಲಿರಲಿ ಅವರನ್ನು ಹಿಡಿದೇ ಹಿಡಿಯುತ್ತೇವೆ. ಪ್ರವೀಣ್ ಮನೆಯವರು ಹೇಳುವಂತೆ ಮುಂದೆ ಇಂತಹ ಘಟನೆಗಳು ಆಗದಿರಲು ಏನು ಮಾಡಬೇಕು ಅದನ್ನು ಮಾಡುತ್ತೇವೆ ಎಂದು ಡಿ.ವಿ ಸದಾನಂದ ಗೌಡ ಭರವಸೆ ನೀಡಿದರು.
ಇದನ್ನೂ ಓದಿ : ಪ್ರವೀಣ್ ಹತ್ಯೆ ಖಂಡಿಸಿ ಗೃಹ ಸಚಿವರ ನಿವಾಸಕ್ಕೆ ಎಬಿವಿಪಿ ಮುತ್ತಿಗೆ, ಲಘು ಲಾಠಿ ಚಾರ್ಜ್