ಸುಬ್ರಹ್ಮಣ್ಯ: ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಸಹಿತ ಮಳೆಯಾದ ಪರಿಣಾಮ, ಉಪ್ಪಿನಂಗಡಿ,ಕಡಬ,ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಿಪಿಸಿಆರ್ಐ ಬಳಿ ಹೆದ್ದಾರಿಗೆ ಅಡ್ಡವಾಗಿ ಮರವೊಂದು ಉರುಳಿ ಬಿದ್ದಿತ್ತು.
![ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ಕಡೆಗಳಲ್ಲಿ ಭಾರಿ ಗಾಳಿ ಸಹಿತ ಮಳೆ](https://etvbharatimages.akamaized.net/etvbharat/prod-images/kn-dk-02-rain-av-pho-kac10008_22022021210131_2202f_1614007891_959.jpg)
ಇದರ ಪರಿಣಾಮ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಸ್ಥಳಕ್ಕೆ ಮೆಸ್ಕಾಂ, ಅರಣ್ಯ, ಪೊಲೀಸ್ ಇಲಾಖೆ ಸಿಬ್ಬಂದಿ ಅಗಮಿಸಿ ಸ್ಥಳೀಯರ ಸಹಕಾರದೊಂದಿಗೆ ತುರ್ತು ಕಾರ್ಯಚರಣೆ ನಡೆಸಿ ಮರವನ್ನು ತೆರವುಗೊಳಿದರು.
ಓದಿ:ಮರಳು ಟಿಪ್ಪರ್ ಪಲ್ಟಿ.. ಪಾದಚಾರಿ ಮಹಿಳೆ ಪವಾಡ ಸದೃಶ ಪಾರು
ಹಲವಾರು ಕಡೆಗಳಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಹಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಕಡಬ, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಈಗಲೂ ಗಾಳಿ ಸಹಿತ ಮಳೆ ಸುರಿಯುತ್ತಿದೆ.