ಬಂಟ್ವಾಳ (ದ.ಕನ್ನಡ): ಪೂಜೆಗೆಂದು ಹೂವು ಕೊಯ್ಯಲು ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾರಾಜೆ ಎಂಬಲ್ಲಿ ನಡೆದಿದೆ. ಇಂದು ಬೆಳಗ್ಗೆ ಈ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯ ಎಂಬುವವರ ಪುತ್ರಿ ರಶ್ಮಿತಾ (24) ಸಾವನ್ನಪ್ಪಿದವರು. ಎಂದಿನಂತೆ ದೇವರ ಪೂಜೆಗೆಂದು ಹೂವನ್ನು ಕೊಯ್ಯಲು ಹೋಗಿದ್ದ ವೇಳೆ ಆಯತಪ್ಪಿ ಕೆರೆಗೆ ಬಿದ್ದಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನೂ ಓದಿ: ಜಮೀನು ವಿವಾದ: ದೇವನಹಳ್ಳಿಯ ಗ್ರಾಮದಲ್ಲಿ ಗುಂಪು ಘರ್ಷಣೆ