ETV Bharat / city

ಯಮಸ್ವರೂಪಿಯಾಗಿ ಬಂದ ಟಿಪ್ಪರ್​​: ಮಂಗಳೂರಲ್ಲಿ ರಸ್ತೆ ಅಪಘಾತಕ್ಕೆ ಮಹಿಳೆ ಬಲಿ

author img

By

Published : Nov 27, 2019, 6:46 PM IST

ಟಿಪ್ಪರ್​​ವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ಕುಂಟಿಕಾನ ಬಳಿ ನಡೆದಿದೆ.

ರಸ್ತೆ ಅಪಘಾತಕ್ಕೆ ಮಹಿಳೆ ಬಲಿ
ರಸ್ತೆ ಅಪಘಾತಕ್ಕೆ ಮಹಿಳೆ ಬಲಿ

ಮಂಗಳೂರು: ಟಿಪ್ಪರ್​​ವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆ ಮೃತಪಟ್ಟಿರುವ ಘಟನೆ ನಗರದ ಕುಂಟಿಕಾನ ಬಳಿ ನಡೆದಿದೆ.

ನಗರದ ಕಾವೂರು ಸಮೀಪದ ವಿವೇಕನಗರ ನಿವಾಸಿ ಪ್ರಿಯಾ ಸುವರ್ಣ (42) ಮೃತಪಟ್ಟವರು. ಪ್ರಿಯಾ ಅವರು ದ್ವಿಚಕ್ರ ವಾಹನದಲ್ಲಿ ತಮ್ಮ ಮನೆಯಿಂದ ನಗರದ ಕೆಪಿಟಿ ಕಡೆಗೆ ತೆರಳುತ್ತಿದ್ದ ವೇಳೆ ಟಿಪ್ಪರ್ ಲಾರಿಯೊಂದು ಇವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಪ್ರಿಯಾ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ತೀವ್ರವಾದ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಈ ಕುರಿತು ಮಂಗಳೂರು ನಗರ ಪಶ್ಚಿಮ ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಗಳೂರು: ಟಿಪ್ಪರೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದ ಯುವತಿ ಮೃತಪಟ್ಟ ಘಟನೆ
ನಗರದ ಕುಂಟಿಕಾನ ಸಮೀಪದ ಇಂದು ನಡೆದಿದೆ.

ನಗರದ ಕಾವೂರು ಸಮೀಪದ ವಿವೇಕನಗರ ನಿವಾಸಿ ನಿವಾಸಿ ಪ್ರಿಯಾ ಸುವರ್ಣ (42) ಮೃತಪಟ್ಟವರು

Body:ಪ್ರಿಯಾ ಅವರು ದ್ವಿಚಕ್ರ ವಾಹನದಲ್ಲಿ ತಮ್ಮ ಮನೆಯಿಂದ ನಗರದ ಕೆಪಿಟಿ ಕಡೆಗೆ ತೆರಳುತ್ತಿದ್ದರು. ಈ ಸಂದರ್ಭ ಟಿಪ್ಪರ್ ಲಾರಿಯೊಂದು ಇವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಪ್ರಿಯಾ ಅವರು ಯುವತಿಯು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರಾದರೂ ತೀವ್ರವಾದ ರಕ್ತಸ್ರಾವದಿಂದ ಮೃತಪಡ್ಟಿದ್ದಾರೆಂದು ಎಂದು ತಿಳಿದುಬಂದಿದೆ.

ಈ ಕುರಿತು ಮಂಗಳೂರು ನಗರ ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.