ಮಂಗಳೂರು: ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ಸಾರಥ್ಯದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ನೂತನ ಮೇಳದ ತಿರುಗಾಟ ನಾಳೆಯಿಂದ ಆರಂಭಗೊಳ್ಳಲಿದೆ.
ಈ ಮೇಳದ ಕಲಾವಿದರು ಹಾಗೂ ಸಿಬ್ಬಂದಿಗೆ ಇದೇ ಮೊದಲ ಬಾರಿಗೆ ಭವಿಷ್ಯ ನಿಧಿ ಯೋಜನೆ (ಪಿಎಫ್) ಹಾಗೂ ಕಲಾವಿದರ ಕುಟುಂಬಕ್ಕೆ ಆರೋಗ್ಯ ವಿಮೆ (ಫ್ಯಾಮಿಲಿ ಹೆಲ್ತ್ ಇನ್ಸುರೆನ್ಸ್) ನೀಡಲಾಗುತ್ತಿದೆ. ಮಳೆಗಾಲದ ಸಂದರ್ಭದಲ್ಲಿ ವಿಶೇಷ ಆಹಾರ ಯೋಜನೆಯನ್ನು ಸಾಕಾರಗೊಳಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಪಟ್ಲ ಸತೀಶ್ ಶೆಟ್ಟಿ ಹೇಳಿದ್ದಾರೆ.