ETV Bharat / city

ಅಕ್ಟೋಬರ್‌ 2ರಂದು 'ಯಶಸ್ವಿನಿ ಯೋಜನೆ' ಮರುಜಾರಿ: ಸಚಿವ ಎಸ್.ಟಿ.ಸೋಮಶೇಖರ್ - ಸಚಿವ ಎಸ್ ಟಿ ಸೋಮಶೇಖರ್

ಅ.2ರಂದು ಗಾಂಧಿ ಜಯಂತಿಯಂದು ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ 'ಯಶಸ್ವಿನಿ ಯೋಜನೆ'ಗೆ ಚಾಲನೆ ನೀಡಲಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

Minister ST Somashekar visits Subramanya

author img

By

Published : Jul 24, 2022, 9:22 AM IST

ಸುಬ್ರಹ್ಮಣ್ಯ: ಸುಮಾರು ಎರಡ್ಮೂರು ವರ್ಷಗಳ ನಂತರ 'ಯಶಸ್ವಿನಿ ಯೋಜನೆ'ಗೆ ಚಾಲನೆ ನೀಡುತ್ತಿದ್ದೇವೆ. ಹಲವು ಸಹಕಾರಿಗಳು ಈ ಯೋಜನೆಯನ್ನು ಮತ್ತೆ ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದರು. ಹೀಗಾಗಿ ಗಾಂಧಿ ಜಯಂತಿಯಂದು ಮರು ಜಾರಿಮಾಡಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ ಸಚಿವರು, ಆರಂಭದಲ್ಲಿ ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಬಳಿಕ ಸಚಿವರಿಗೆ ದೇವಳದ ಅರ್ಚಕ ಸತ್ಯನಾರಾಯಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್‌.ಟಿ.ಸೋಮಶೇಖರ್, "ಯಶಸ್ವಿನಿ ಯೋಜನೆ ಜಾರಿ ಮಾಡಬೇಕು ಎಂಬುದಾಗಿ ರೈತರು ಮತ್ತು ಸಹಕಾರಿಗಳ ಒತ್ತಾಸೆ ಇತ್ತು. ಹಾಗಾಗಿ ಅಕ್ಟೋಬರ್​​ 2ರಂದು ರಾಜ್ಯಾದ್ಯಂತ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೊಳಿಸಲಾಗುವುದು. ಈ ಹಿಂದೆ ಸದಸ್ಯರಾಗಿದ್ದವರು ಕೂಡಾ ಮತ್ತೆ ಸದಸ್ಯತ್ವವನ್ನು ಪಡೆದುಕೊಳ್ಳಬೇಕು" ಎಂದರು.

ಪ್ರತ್ಯೇಕ ಬ್ಯಾಂಕ್: ಹೈನುಗಾರಿಕೆಯನ್ನು ಪ್ರೋತ್ಸಾಹಿಸುವ ಹಿನ್ನೆಲೆಯಲ್ಲಿ ಸರ್ಕಾರ ಯೋಜನೆ ರೂಪಿಸುತ್ತಿದೆ. ಈಗಾಗಲೇ 26 ಲಕ್ಷ ರೈತರು ಹಾಲು ಹಾಕುತ್ತಿದ್ದಾರೆ. ಅವರಿಗೆ ಪ್ರತ್ಯೇಕ ನಂದಿನಿ ಕ್ಷೀರಾ ಸಮೃದ್ಧಿ ಬ್ಯಾಂಕ್ ಅನ್ನು ಈಗಾಗಲೇ ಅಮಿತ್ ಶಾ ಲೋಕಾರ್ಪಣೆ ಮಾಡಿದ್ದಾರೆ. ರಿಸರ್ವ್ ಬ್ಯಾಂಕ್‌ನಿಂದಲೂ ಅನುಮತಿ ಪಡೆಯಲಾಗಿದ್ದು, ಅವರಿಗೆ ಪೂರಕ ಮಾಹಿತಿ, ದಾಖಲೆ ನೀಡಲಾಗಿದೆ.

ಸುಮಾರು ವರ್ಷದಿಂದ ಹೊಸತಾಗಿ ಯಾರಿಗೂ ಕೋ-ಆಪರೇಟಿವ್ ಬ್ಯಾಂಕ್‌ಗೆ ಅವಕಾಶ ನೀಡಿಲ್ಲ. ಅದಕ್ಕಾಗಿ ಇದೀಗ ಅವಕಾಶ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳ ಕನಸಿನ ಕೂಸಾದ ಈ ಬ್ಯಾಂಕ್ ಸಹಕಾರ ಕ್ಷೇತ್ರದ ಬ್ಯಾಂಕ್ ಆಗಿ ಜನತೆಗೆ ಸಹಕಾರ ನೀಡಲಿದೆ. ನಬಾರ್ಡ್​ನಿಂದ ಇದಕ್ಕೆ ಬೇಕಾದ ಯೋಜನೆಗಳನ್ನು ಪಡೆಯಲು ಪ್ರಯತ್ನಿಸಲಾಗುವುದು. ಇದನ್ನು ಕೂಡ ಅಕ್ಟೋಬರ್‌ನಲ್ಲಿ ಆರಂಭಿಸಲಾಗುವುದು ಎಂದರು.

ತಕ್ಷಣ ಪರಿಹಾರ: ಬೆಳೆಸಾಲ ನೀಡಲು ಕೃಷಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ ಕೂಡಲೇ ಹಣ ಬಿಡುಗಡೆ ಮಾಡಲು ಪ್ರಯತ್ನಿಸಲಾಗುವುದು. ಅತಿವೃಷ್ಠಿಯಿಂದಾಗಿ ಬೆಳೆ ಹಾನಿಗೊಳಗಾದ ರೈತರಿಗೆ ಮತ್ತು ಮನೆ ಇತ್ಯಾದಿಗಳು ಹಾನಿಗೊಳಗಾದ ಕೃಷಿಕರಿಗೆ ತಕ್ಷಣ ಪರಿಹಾರ ವಿತರಿಸಲಾಗುತ್ತಿದೆ. 5 ಲಕ್ಷ ರೂ., 3 ಲಕ್ಷ ರೂ., 1 ಲಕ್ಷ ಹಾಗೂ 50 ಸಾವಿರದ ತನಕ ಜಿಲ್ಲಾಧಿಕಾರಿಗಳ ವರದಿಯನ್ನು ಆಧರಿಸಿ ತಕ್ಷಣ ಪರಿಹಾರ ವಿತರಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ಅಕ್ಟೋಬರ್ ತಿಂಗಳಿನಿಂದ ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಚಿಂತನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.