ETV Bharat / city

ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಯುವತಿ ಪತ್ತೆ... ಕಾರು ಬಿಟ್ಟು ಯುವಕ ಪರಾರಿ

ಮಂಗಳೂರಿನ ಹೊರವಲಯದ ಕುಳಾಯಿ ಎಂಬಲ್ಲಿ ಕಾರಿನಲ್ಲಿ ಯುವತಿಯೊಬ್ಬಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

author img

By

Published : Dec 13, 2019, 4:43 PM IST

woman found unconscious in car
woman found unconscious in car

ಮಂಗಳೂರು: ಮಂಗಳೂರಿನ ಹೊರವಲಯದ ಕುಳಾಯಿ ಎಂಬಲ್ಲಿ ಕಾರಿನಲ್ಲಿ ಯುವತಿಯೊಬ್ಬಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ಯುವಕನೊಬ್ಬ ಚಾಲನೆ ಮಾಡುತ್ತಿದ್ದ ಕಾರಿನಲ್ಲಿ ಯುವತಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ಕೆಲ ವಾಹನ ಸವಾರರು ಗಮನಿಸಿದ್ದಾರೆ. ಈ ಹಿನ್ನೆಲೆ ಕಾರನ್ನು ನಿಲ್ಲಿಸುವಂತೆ ಸೂಚಿಸಿದರೂ ಯುವಕ ಕಾರನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಇದರಿಂದ ಅನುಮಾನಗೊಂಡ ಸ್ಥಳೀಯರು ಕಾರನ್ನು ತಡೆದು ನಿಲ್ಲಿಸಿದ್ದು ಈ ವೇಳೆ ಯುವಕ ಕಾರಿನಿಂದ ಇಳಿದು ಪರಾರಿಯಾಗಿದ್ದಾನೆ. ಬಳಿಕ ಸಾರ್ವಜನಿಕರು ಸುರತ್ಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಯುವತಿ ಮತ್ತು ಯುವಕ ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳೆಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಡಾ. ಪಿ ಎಸ್ ಹರ್ಷ ಅವರು, ಅವರದ್ದು ಖಾಸಗಿ ವಿಚಾರ, ಈ ಬಗ್ಗೆ ಬಂದಿರುವ ಆರೋಪಗಳು ಹುರುಳಿಲ್ಲದ್ದು ಎಂದು ಹೇಳಿದ್ದಾರೆ.

Intro:ಮಂಗಳೂರು: ಮಂಗಳೂರಿನ ಹೊರವಲಯದ ಕುಳಾಯಿ ಎಂಬಲ್ಲಿ ಕಾರಿನಲ್ಲಿ ಯುವತಿಯೊಬ್ಬಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದ್ದು ಸಾರ್ವಜನಿಕರ ಹಲವು ಅನುಮಾನಗಳಿಗೆ ಕಾರಣವಾಗಿದೆ.Body:

ಯುವಕನು ಚಲಾಯಿಸುತ್ತಿದ್ದ ಕಾರಿನಲ್ಲಿ ಯುವತಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕೆಲವು ವಾಹನ ಸವಾರರು ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರನ್ನು ನಿಲ್ಲಿಸುವಂತೆ ಸೂಚಿಸಿದರೂ ಯುವಕ ಕಾರನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಇದರಿಂದ ಅನುಮಾನಗೊಂಡ ಸ್ಥಳೀಯರು ಕಾರನ್ನು ತಡೆದು ನಿಲ್ಲಿಸಿದ್ದು ಈ ವೇಳೆ ಯುವಕ ಕಾರಿನಿಂದ ಇಳಿದು ಪರಾರಿಯಾಗಿದ್ದಾನೆ. ಬಳಿಕ ಸಾರ್ವಜನಿಕರು ಸುರತ್ಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಯುವತಿ ಮತ್ತು ಯುವಕ ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಸ್ನೇಹಿತರೆಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ಪ್ರತಿಕ್ರೀಯಿಸಿರುವ ಮಂಗಳೂರು ಪೊಲೀಸ್ ಕಮೀಷನರ್ ಡಾ ಪಿ ಎಸ್ ಹರ್ಷ ಅವರು ಅವರದು ಖಾಸಗಿ ವಿಚಾರವಾಗಿದ್ದು ಆ ಬಗ್ಗೆ ಬಂದಿರುವ ಆರೋಪಗಳು ಹುರುಳಿಲ್ಲದ್ದು ಎಂದು ಹೇಳಿದ್ದಾರೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.