ಮಂಗಳೂರು: 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಯುವಕನೋರ್ವನನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.
ನಿತೇಶ್ ರಿತಿನ್ ಯಾನೆ ನಿತಿನ್ (19) ಬಂಧಿತ ಆರೋಪಿ. ಡಿ.24 ರಂದು ನೆರೆಮನೆಯ ಬಾಲಕಿಯೊಬ್ಬಳು ಶಾಲೆ ಮುಗಿಸಿ, ಈತನ ಮನೆಗೆ ಟಿವಿ ನೋಡಲು ಬಂದಿದ್ದಳು. ಈ ಸಂದರ್ಭದಲ್ಲಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದನಂತೆ. ಭಯಗೊಂಡ ಬಾಲಕಿ ಅಲ್ಲಿಂದ ತನ್ನ ಮನೆಗೆ ಓಡಿ ಹೋಗಿದ್ದಳು. ಈ ವೇಳೆ, ಅಲ್ಲಿಗೂ ಹೋದ ಆರೋಪಿ ಆಕೆಗೆ ಈ ವಿಷಯ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವ ಬೆದರಿಕೆಯೊಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಬಾಲಕಿಯ ತಂದೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಪ್ರಿಯಕರನನ್ನು ಭೇಟಿಯಾಗಲು ವಾಘಾ ಗಡಿ ದಾಟುತ್ತಿದ್ದ ವಿವಾಹಿತ ಮಹಿಳೆ ಬಂಧನ