ಮೈಸೂರು : ಎಂಟು ತಿಂಗಳ ಮಗುವನ್ನು ಸೋದರ ಮಾವನೇ ಗೋಡೆಗೆ ಬಡಿದು ಹತ್ಯೆ ಮಾಡಿರುವ ಘಟನೆ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸರಕಾರಿ ಶಾಲೆಯ ರಸ್ತೆಯಲ್ಲಿ ನಡೆದಿದೆ. ಇಲ್ಲಿನ ಕನಕಗಿರಿ ನಿವಾಸಿ ರಾಜು(33) ಎಂಬಾತ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.
ಈತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದ್ದು,ಘಟನಾ ಸ್ಥಳಕ್ಕೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ : ಹಾವೇರಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ನಾಲ್ವರು ಸಾವು