ಮೈಸೂರು : ಪ್ರತಿಭಟನೆ ವೇಳೆ ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆಯುತ್ತಿದ್ದ ಸಂದರ್ಭದಲ್ಲಿ ರೈತನೊಬ್ಬ ಅಸ್ವಸ್ಥನಾಗಿ ಕುಸಿದು ಬಿದ್ದ ಘಟನೆ ತಿ.ನರಸೀಪುರದಲ್ಲಿ ನಡೆದಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ರೈತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಪ್ರತಿಭಟನಾ ನಿರತರನ್ನು ಬಂಧಿಸಲು ಪೊಲೀಸರು ಮುಂದಾದರು. ಈ ವೇಳೆ ಗುರುಸ್ವಾಮಿ ಎಂಬ ರೈತ ಅಸ್ವಸ್ಥನಾಗಿ ನೆಲಕ್ಕೆ ಬಿದ್ದರು.
ಇದರಿಂದ, ರೈತರು ಮತ್ತಷ್ಟು ಆಕ್ರೋಶಗೊಂಡ ಹಿನ್ನೆಲೆ ಲಘು ಲಾಠಿ ಪ್ರಹಾರ ಮಾಡಿ ಪ್ರತಿಭಟನಾಕಾರರನ್ನು ಚದುರಿಸಲಾಯಿತು. ರೈತ ಮುಖಂಡ ಶಂಕರ್, ಪೊಲೀಸರು ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.