ETV Bharat / city

ರಾಮ ಮಂದಿರ ನಿರ್ಮಾಣಕ್ಕೆ ಮೈಸೂರಿನ ಯುವಕನಿಂದ ಬೆಳ್ಳಿ ಇಟ್ಟಿಗೆ ಕಾಣಿಕೆ - Mysore youth for the construction of Sri Rama Mandira

ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಮೈಸೂರಿನ ನ್ಯಾಯವಾದಿ ಹರೀಶ್ ಕುಮಾರ್ ಹೆಗಡೆ ಎಂಬುವರು ಬೆಳ್ಳಿ ಇಟ್ಟಿಗೆಯನ್ನು ಕಾಣಿಕೆಯಾಗಿ ನೀಡಿದರು.

A silver brick presented by a Mysore youth
ಬೆಳ್ಳಿ ಇಟ್ಟಿಗೆ ಕಾಣಿಕೆ
author img

By

Published : Jan 23, 2021, 6:42 PM IST

ಮೈಸೂರು: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಮೈಸೂರಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ದೇಣಿಗೆ ಸಂಗ್ರಹಿಸುತ್ತಿದ್ದು, ಈ ವೇಳೆ ಯುವಕನೋರ್ವ ಬೆಳ್ಳಿ ಇಟ್ಟಿಗೆ ನೀಡಿ ಭಕ್ತಿ ಮೆರೆದರು.

ಶ್ರೀರಾಮ ಮಂದಿರಕ್ಕಾಗಿ ನ್ಯಾಯವಾದಿ ಹರೀಶ್ ಕುಮಾರ್ ಹೆಗಡೆಯವರು ಬೆಳ್ಳಿ ಇಟ್ಟಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮುಖಾಂತರ ಹಸ್ತಾಂತರಿಸಿದರು.

ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡುತ್ತಿರುವ ಹಿನ್ನೆಲೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ದೇಣಿಗೆ ಸಂಗ್ರಹ ಅಭಿಯಾನ ಹಮ್ಮಿಕೊಂಡಿದ್ದು, ಇಂದು ಸಹಕಾರ ಹಾಗೂ ಜಿಲ್ಲಾ ಉಸ್ತುಚಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.

ನಂತರ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ಮೈಸೂರು ಬಿಜೆಪಿ ನಗರಾಧ್ಯಕ್ಷರು, ಸಂಸದರು, ಶಾಸಕರು ಹಾಗೂ ಪದಾಧಿಕಾರಿಗಳು ಮನೆ ಮನೆಗೆ ಹೋಗಿ ದೇಣಿಗೆ ಸಂಗ್ರಹಿಸಿ, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡುವ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿದ್ದೇವೆ. ಎಲ್ಲರೂ ಅವರವರ ಕೈಲಾದಷ್ಟು ಸಹಾಯ ಮಾಡಿ ಎಂದು ಮನವಿ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.