ETV Bharat / city

ವಿದ್ಯಾರ್ಥಿನಿಯ ಜೊತೆ ಅಸಭ್ಯ ವರ್ತನೆ.. ಮೈಸೂರಿನಲ್ಲಿ ಮುಖ್ಯ ಶಿಕ್ಷಕ ಸೇವೆಯಿಂದ ವಜಾ - teacher suspended allegedly miss behave with student in mysore

ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿದ ಮುಖ್ಯಶಿಕ್ಷಕನ ವಿರುದ್ಧ ಈಗಾಗಲೇ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದಲ್ಲದೇ, ಪ್ರಕರಣದ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಬಿಇಒ ಚಂದ್ರಕಾಂತ್ ಮತ್ತು ಡಿಡಿಪಿಐ ರಾಮಚಂದ್ರರಾಜೇ ಅರಸ್ ತಿಳಿಸಿದ್ದಾರೆ..

teacher-suspended
ಶಿಕ್ಷಕ ಸೇವೆಯಿಂದ ವಜಾ
author img

By

Published : Jan 29, 2022, 3:05 PM IST

Updated : Jan 29, 2022, 8:18 PM IST

ಮೈಸೂರು : ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿ ಸಿಕ್ಕಿಬಿದ್ದಿದ್ದ ಹೆಚ್​ ಡಿ ಕೋಟೆ ತಾಲೂಕಿನ ಶಾಲೆಯೊಂದರ ಮುಖ್ಯ ಶಿಕ್ಷಕನನ್ನು ಇದೀಗ ಸೇವೆಯಿಂದ ವಜಾ ಮಾಡಲಾಗಿದೆ.

ಹೆಚ್ ಡಿ ಕೋಟೆ ತಾಲೂಕಿನ ಖಾಸಗಿ ಶಾಲೆಯ ಮುಖ್ಯಶಿಕ್ಷಕರಾದ ಆರ್ ಎಂ ಅನಿಲ್‌ಕುಮಾರ್ ಸೇವೆಯಿಂದ ವಜಾಗೊಂಡ ಶಿಕ್ಷಕ. ಶಾಲೆ ಕೊಠಡಿಯೊಂದರಲ್ಲಿ ವಿದ್ಯಾರ್ಥಿನಿಯ ಜೊತೆ ಶಿಕ್ಷಕ ಅನಿಲ್​ಕುಮಾರ್​ ಅಸಭ್ಯವಾಗಿ ವರ್ತಿಸುತ್ತಿದ್ದನ್ನು ಕೆಲ ವಿದ್ಯಾರ್ಥಿಗಳು ಇದನ್ನು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.

ಬಳಿಕ ಶಿಕ್ಷಕನ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿ ಶಿಕ್ಷಕನ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದರು. ಹಾಗಾಗಿ, ಆ ಖಾಸಗಿ ಶಾಲೆಯ ಆಡಳಿತ ಮಂಡಳಿ ತುರ್ತು ಸಭೆಯನ್ನು ನಡೆಸಿ ಮುಖ್ಯಶಿಕ್ಷಕ ಆರ್ ಎಂ ಅನಿಲ್​ಕುಮಾರ್​ನನ್ನು ಸೇವೆಯಿಂದ ವಜಾಗೊಳಿಸಿ ಆದೇಶಿಸಿದೆ.

ಇದನ್ನೂ ಓದಿ: ಓಖಾ ಸಮುದ್ರದಿಂದ 7 ಮೀನುಗಾರರನ್ನು ಅಪಹರಿಸಿದ ಪಾಕ್​​

ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿದ ಮುಖ್ಯಶಿಕ್ಷಕನ ವಿರುದ್ಧ ಈಗಾಗಲೇ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದಲ್ಲದೇ, ಪ್ರಕರಣದ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಬಿಇಒ ಚಂದ್ರಕಾಂತ್ ಮತ್ತು ಡಿಡಿಪಿಐ ರಾಮಚಂದ್ರರಾಜೇ ಅರಸ್ ತಿಳಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 29, 2022, 8:18 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.