ETV Bharat / city

ಮೈಸೂರು: ಇನ್ಸ್​​​ಪೆಕ್ಟರ್​​​ ಬಾಲಕೃಷ್ಣ ಮನೆ ಮೇಲೆಯೂ ಎಸಿಬಿ ದಾಳಿ! - ವಿಜಯನಗರ ಇನ್​ಸ್ಪೆಕ್ಟರ್​ ಬಾಲಕೃಷ್ಣ

ವಿಜಯನಗರ ಪೊಲೀಸ್ ಠಾಣೆಯ ಇನ್ಸ್​​​ಪೆಕ್ಟರ್​​​ ಬಾಲಕೃಷ್ಣ ಅವರ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ ಹಾಸನ ಜಿಲ್ಲೆಯಲ್ಲಿರುವ ಅವರ ಮಾವ ಚಂದ್ರೇಗೌಡ ಅವರ ಮನೆಯ ಮೇಲೂ ದಾಳಿ ನಡೆಸಲಾಗಿದೆ..

ACB raid on inspector balakrishna house
ಜಯನಗರ ಇನ್​ಸ್ಪೆಕ್ಟರ್​ ಬಾಲಕೃಷ್ಣ
author img

By

Published : Mar 16, 2022, 10:58 AM IST

ಮೈಸೂರು: ರಾಜ್ಯದ 75 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ಶಾಕ್​​ ಕೊಟ್ಟಿದ್ದಾರೆ. ನಗರದ ವಿಜಯನಗರ ಪೊಲೀಸ್ ಠಾಣೆಯ ಇನ್ಸ್​​​​ಪೆಕ್ಟರ್​​ ​ ಮನೆ ಹಾಗೂ ಅವರ ಮಾವನ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದಾರೆ.

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ಮೈಸೂರು ನಗರದ ವಿಜಯನಗರ ಪೊಲೀಸ್ ಠಾಣೆಯ ಇನ್ಸ್​​​​ಪೆಕ್ಟರ್​​​ ಬಾಲಕೃಷ್ಣ ಅವರ ರೈಲ್ವೆ ಕ್ವಾರ್ಟರ್ಸ್ ನಲ್ಲಿರುವ ಮನೆಯ ಮೇಲೆ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿರುವ ಅವರ ಮಾವ ಚಂದ್ರೇಗೌಡ ಅವರ ಮನೆಯ ಮೇಲೂ ಏಕ ಕಾಲದಲ್ಲಿ ದಾಳಿ ಮಾಡಲಾಗಿದ್ದು, ಅಲ್ಲಿಯೂ ಸಹ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಮಂಗಳೂರು: ಮೆಸ್ಕಾಂ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

ಬಾಲಕೃಷ್ಣ ಅವರು ಪ್ರಭಾವಿ ವ್ಯಕ್ತಿಗಳ ಸಹಕಾರದಿಂದ ಒಂದೇ ಠಾಣೆಯಲ್ಲಿ ಕಳೆದ ಮೂರು ವರ್ಷಗಳಿಂದಲೂ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇವರ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಎಸಿಬಿ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಇನ್ನೂ ನಾಲ್ಕು ದಿನದ ಹಿಂದಿಯೇ ಬಾಲಕೃಷ್ಣ ಕೆಲಸಕ್ಕೆ ರಜೆ ಹಾಕಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.