ETV Bharat / city

ಆಕ್ಸಿಜನ್ ಬೆಡ್, ಐಸಿಯು ಹೆಚ್ಚಳಕ್ಕೆ ಕ್ರಮವಹಿಸಿ: ಎಸ್.ಟಿ. ಸೋಮಶೇಖರ್ - mysore corona news

ಆಕ್ಸಿಜನ್ ಕೊರತೆಯಿಂದ ಸಾವು ಉಂಟಾಗದಂತೆ ಎಚ್ಚರವಹಿಸಬೇಕಾದ್ದು ಎಲ್ಲರ ಜವಬ್ದಾರಿಯಾಗಿದೆ. ಅಧಿಕಾರಿಗಳು ಆಕ್ಸಿಜನ್ ಅಗತ್ಯತೆಯ ಬಗ್ಗೆ ಸರಿಯಾದ ದಾಖಲಾತಿಗಳನ್ನು ಕೊಡಬೇಕು ಎಂದು ಅಧಿಕಾರಿಗಳಿಗೆ ಸಚಿವ ಎಸ್.ಟಿ. ಸೋಮಶೇಖರ್ ಸೂಚಿಸಿದರು.

 Action to increase oxygen bed, ICU: ST Somashekar

author img

By

Published : May 14, 2021, 4:46 PM IST

ಮೈಸೂರು: ಆಕ್ಸಿಜನ್ ಬೆಡ್, ವೆಂಟಿಲೇಟರ್ ಹಾಗೂ ಐಸಿಯುಗಳ ಸಂಖ್ಯೆಯನ್ನು ಹೆಚ್ಚಿಸಲು ಬೇಕಾದ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಚಿವ ಎಸ್.ಟಿ. ಸೋಮಶೇಖರ್ ಅವರು ಅಧಿಕಾರಿಗಳಿಗೆ ತಿಳಿಸಿದರು.

ಮೈಸೂರಿನ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಕೋವಿಡ್-19 ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾಮಾನ್ಯ ಹಾಸಿಗೆಗಳ ಲಭ್ಯತೆ ಸಾಕಷ್ಟು ಇದೆ. ಆದರೆ, ಆಮ್ಲಜನಕಯುಕ್ತ ಹಾಸಿಗೆಗಳು, ವೆಂಟಿಲೇಟರ್​ಗಳು ಹಾಗೂ ಐಸಿಯುಗಳಿಗೆ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕಿದೆ ಎಂದರು.

ಆಕ್ಸಿಜನ್ ಕೊರತೆಯಿಂದ ಸಾವು ಉಂಟಾಗದಂತೆ ಎಚ್ಚರವಹಿಸಬೇಕಾದ್ದು ಎಲ್ಲರ ಜವಾಬ್ದಾರಿಯಾಗಿದೆ. ಅಧಿಕಾರಿಗಳು ಆಕ್ಸಿಜನ್ ಅಗತ್ಯತೆಯ ಬಗ್ಗೆ ಸರಿಯಾದ ದಾಖಲಾತಿಗಳನ್ನು ಕೊಡಬೇಕು. ಅಗತ್ಯಕ್ಕೆ ತಕ್ಕಂತೆ ಜಿಲ್ಲೆಗೆ ಆಕ್ಸಿಜನ್ ತರುವ ಕೆಲಸವನ್ನು ಮಾಡಲಾಗುವುದು. ಆದರೆ, ಅಧಿಕಾರಿಗಳು ಸರಿಯಾದ ದಾಖಲೆ ಹಾಗೂ ಮಾಹಿತಿ ಕೊಡದಿದ್ದರೆ ಸರ್ಕಾರದ ಹಂತದಲ್ಲಿ ಹೆಚ್ಚಿನ ಆಕ್ಸಿಜನ್ ಕೇಳಲು ಕಷ್ಟವಾಗುತ್ತದೆ ಎಂದು ತಿಳಿಸಿದರು.

ಅಗತ್ಯ ಇಲ್ಲದವರೂ ಸಹ ಐಸಿಯು ಹಾಗೂ ಆಕ್ಸಿಜನ್ ಬೆಡ್ ಕೇಳುವುದರಿಂದ ಇವುಗಳ ಮೇಲೆ ಒತ್ತಡ ಹೆಚ್ಚಿದೆ. ಕೋವಿಡ್ ಮಿತ್ರದಲ್ಲಿ ಮೊದಲು ತಪಾಸಣೆ ನಡೆಸಿ ವೈದ್ಯರು ಶಿಫಾರಸು ಮಾಡುವ ಸೋಂಕಿತರಿಗೆ ಆಕ್ಸಿಜನ್ ಬೆಡ್ ಹಾಗೂ ಐಸಿಯು ನೀಡಿದರೆ ಸಮಸ್ಯೆ ಕಡಿಮೆಯಾಗುತ್ತದೆ ಎಂದು ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ತನ್ವೀರ್ ಸೇಠ್, ಮುಡಾ ಅಧ್ಯಕ್ಷ ಹೆಚ್.ವಿ. ರಾಜೀವ್, ಜೆ.ಎಲ್.ಆರ್. ಅಧ್ಯಕ್ಷ ಅಪ್ಪಣ್ಣ, ದೇವರಾಜ ಅರಸು ನಿಗಮದ ಅಧ್ಯಕ್ಷ ರಘು ಕೌಟಿಲ್ಯ, ಮೃಗಾಲಯದ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತಿತರರು ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.