ETV Bharat / city

ಹಂಸಲೇಖ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ತಡೆ ನೀಡಿರುವುದು ನ್ಯಾಯಕ್ಕೆ ಸಂದ ಜಯ: ನಟ ಚೇತನ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಕ್ಕೆ ಬಲವಿದೆ. ಪೊಲೀಸರು ನ್ಯಾಯದ ಪರವಾಗಿದ್ದಾರೆ. ಹಂಸಲೇಖ ಹೇಳಿಕೆ ಸಂವಿಧಾನ ಬದ್ಧವಾಗಿದೆ. ಕೋರ್ಟ್ ಅದಕ್ಕೆ ತಡೆಯಾಜ್ಞೆ ನೀಡಿದೆ ಎಂದು ನಟ ಚೇತನ್ ಅಭಿಪ್ರಾಯಪಟ್ಟರು.

actor Chetan
ನಟ ಚೇತನ್
author img

By

Published : Dec 2, 2021, 1:33 PM IST

Updated : Dec 2, 2021, 1:53 PM IST

ಮೈಸೂರು: ಉಡುಪಿಯ ಪೇಜಾವರ ಶ್ರೀಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂಬ ಆರೋಪ ಸಂಬಂಧ ಬಸವನಗುಡಿ ಠಾಣೆಯಲ್ಲಿ ನಾದಬ್ರಹ್ಮ ಹಂಸಲೇಖ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್‌ ತಡೆ ನೀಡಿರುವುದು ನ್ಯಾಯಕ್ಕೆ ಸಂದ ಜಯ ಎಂದು ನಟ ಚೇತನ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಕ್ಕೆ ಬಲವಿದೆ. ಪೊಲೀಸರು ನ್ಯಾಯದ ಪರವಾಗಿದ್ದಾರೆ. ಹಂಸಲೇಖ ಹೇಳಿಕೆ ಸಂವಿಧಾನ ಬದ್ಧವಾಗಿದೆ. ಕೋರ್ಟ್ ಅದಕ್ಕೆ ತಡೆಯಾಜ್ಞೆ ನೀಡಿದೆ ಎಂದರು.

ನಟ ಚೇತನ್ ಮೈಸೂರಿನಲ್ಲಿ ಮಾತನಾಡಿರುವುದು

ಪಿರಿಯಾಪಟ್ಟಣ ತಾಲೂಕಿನ ರಾಣಿಗೇಟ್ ಬಳಿ ಇರುವ ಕುರುಬರ ಹಾಡಿ ನಿವಾಸಿ ಬಸವ ಎಂಬುವವರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ಮಾಡಿರುವುದು ಖಂಡನೀಯ. ಪೊಲೀಸರು ಅರಣ್ಯ ಇಲಾಖೆ ಸಿಬ್ಬಂದಿಯ ದೂರು ಸ್ವೀಕರಿಸಿದ್ದಾರೆ. ಆದಿವಾಸಿಗಳಿಂದ ದೂರು ಸ್ವೀಕರಿಸಬೇಕು. ಈ ಬಗ್ಗೆ ತನಿಖೆ ನಡೆಸಬೇಕು. ಆದಿವಾಸಿಗಳಿಗೆ ಅರಣ್ಯ ಇಲಾಖೆ ನ್ಯಾಯ ನೀಡಬೇಕು. ಗುಂಡೇಟಿನಿಂದ ಗಾಯಗೊಂಡಿರುವ ವ್ಯಕ್ತಿಗೆ ಚಿಕಿತ್ಸೆ ಕೊಡಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಪೇಜಾವರ ಶ್ರೀಗಳ ವಿರುದ್ಧ ಹೇಳಿಕೆ ಆರೋಪ; ಹಂಸಲೇಖ ವಿರುದ್ಧ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Last Updated : Dec 2, 2021, 1:53 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.