ಮೈಸೂರು: ಕರ್ನಾಟಕ ಮೃಗಾಲಯಗಳ ಪ್ರಾಧಿಕಾರದ ರಾಯಭಾರಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಧಿಕೃತವಾಗಿ ನೇಮಕವಾಗಿದ್ದಾರೆ. ಬುಧವಾರ ಹುಟ್ಟುಹಬ್ಬದ ಪ್ರಯುಕ್ತ ದರ್ಶನ್ ಅವರನ್ನು ಮೃಗಾಲಯದ ಪ್ರಾಧಿಕಾರವು ಅಧಿಕೃತವಾಗಿ ರಾಯಭಾರಿಯನ್ನಾಗಿ ಘೋಷಿಸಿದೆ.
ಕೋವಿಡ್ ಮೊದಲ ಹಾಗೂ ಎರಡನೇ ಅಲೆಯ ವೇಳೆ ಲಾಕ್ಡೌನ್ನಿಂದಾಗಿ ಮೃಗಾಲಯವನ್ನು ಬಂದ್ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಮೃಗಾಲಯದ ಆದಾಯವು ಕಡಿಮೆಯಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ನಟ ದರ್ಶನ್ ಅವರು ಮೃಗಾಲಯದ ಪ್ರಾಣಿ, ಪಕ್ಷಿಗಳನ್ನು ದತ್ತು ತೆಗೆದುಕೊಳ್ಳುವಂತೆ ಕರೆ ನೀಡಿದ್ದರು. ಈ ಕರೆಯ ನಂತರ ಮೂರು ಕೋಟಿ ರೂ.ಗೂ ಅಧಿಕ ಮೊತ್ತ ಸಂಗ್ರಹವಾಗಿತ್ತು.
ಪ್ರಾಧಿಕಾರವು 149ನೇ ಆಡಳಿತ ಮಂಡಳಿ ಸಭೆಯಲ್ಲಿ ದರ್ಶನ್ ಅವರನ್ನು ರಾಯಭಾರಿಯನ್ನಾಗಿ ನೇಮಿಸಲು ತೀರ್ಮಾನ ಮಾಡಿತ್ತು. ಅದರಂತೆ ನಿನ್ನೆ ಹುಟ್ಟುಹಬ್ಬದ ಪ್ರಯುಕ್ತ ಮೃಗಾಲಯ ಮಂಡಳಿಯು ಶುಭಾಶಯ ಕೋರಿ, ರಾಯಭಾರಿಯಾಗಿ ಪ್ರಕಟಿಸಿದೆ ಎಂದು ಕರ್ನಾಟಕ ಮೃಗಾಲಯದ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಈಟಿವಿ ಭಾರತ್ಗೆ ತಿಳಿಸಿದ್ದಾರೆ.
ಇದನ್ನೂ ಓದಿ: ನಾಲ್ಕು ವರ್ಷಗಳ ಬಳಿಕ ಬೀದರ್‌ನ ಉಗ್ರ ನರಸಿಂಹ ದೇಗುಲಕ್ಕೆ ಭಕ್ತರ ಪ್ರವೇಶ