ETV Bharat / city

ಪ್ರಾಣಿಗಳ ದತ್ತು ಸ್ವೀಕರಿಸಿದವರಿಗೆ ಪ್ರಮಾಣಪತ್ರ ವಿತರಿಸಿದ ನಟ ದರ್ಶನ್ - ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌

ನಟ ದರ್ಶನ್‌ ಅವರ ಕರೆಗೆ ಓಗೊಟ್ಟು ಮೃಗಾಲಯದಲ್ಲಿ ಪ್ರಾಣಿಗಳನ್ನು ದತ್ತು ಸ್ವೀಕರಿಸಿದ್ದ ತಮ್ಮ ಅಭಿಮಾನಿಗಳಿಗೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಮೈಸೂರಿನಲ್ಲಿಂದು ಪ್ರಮಾಣ ಪತ್ರ ವಿತರಿಸಿದ್ದಾರೆ.

Actor Darshan distributes certificate to adoption of animals at zoo
ಮೃಗಾಲಯದಲ್ಲಿ ಪ್ರಾಣಿಗಳ ದತ್ತು ಸ್ವೀಕರಿಸಿದವರಿಗೆ ನಟ ದರ್ಶನ್ ಪ್ರಮಾಣಪತ್ರ ವಿತರಣೆ
author img

By

Published : Aug 24, 2021, 2:24 PM IST

ಮೈಸೂರು: ಮೃಗಾಲಯದಲ್ಲಿ ಪ್ರಾಣಿಗಳನ್ನು ದತ್ತು ಸ್ವೀಕರಿಸಿದ ತಮ್ಮ ಅಭಿಮಾನಿಗಳಿಗೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಇಂದು ಮೃಗಾಲಯದ ಪ್ರಾಧಿಕಾರದ ಅಧ್ಯಕ್ಷರಾದ ಎಲ್.ಆರ್ ಮಹದೇವಸ್ವಾಮಿ ಸಮ್ಮುಖದಲ್ಲಿ ಪ್ರಮಾಣ ಪತ್ರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದರ್ಶನ್ ಅಭಿಮಾನಿಗಳಾದ ಉದ್ಯಮಿ ಗಂಗರಾಜ್, ಕಾರ್ಯನಿರ್ವಾಹಕ ನಿರ್ದೇಶಕರಾದ ಅಜಿತ್ ಕುಲಕರ್ಣಿ, ಮೃಗಾಲಯ ಸಿಬ್ಬಂದಿ ರಾಜೇಗೌಡರು ಹಾಗು ರಘು ಮತ್ತಿತರು ಉಪಸ್ಥಿತರಿದ್ದರು.

ಮೃಗಾಲಯದಲ್ಲಿ ಪ್ರಾಣಿಗಳ ದತ್ತು ಸ್ವೀಕರಿಸಿದವರಿಗೆ ನಟ ದರ್ಶನ್ ಪ್ರಮಾಣಪತ್ರ ವಿತರಣೆ

ಕೊರೊನಾದಿಂದಾಗಿ ರಾಜ್ಯದ 9 ಮೃಗಾಲಯಗಳಲ್ಲಿ ಆರ್ಥಿಕ ಸಮಸ್ಯೆ ಎದುರಾಗಿತ್ತು. ಪ್ರಾಣಿಗಳ ದತ್ತು ಸ್ವೀಕರಿಸಿ ಸಹಾಯ ಮಾಡಿ ಎಂದು ನಟ, ಅರಣ್ಯ ಇಲಾಖೆ ರಾಯಭಾರಿ ದರ್ಶನ್ ಮಾಡಿದ್ದ ಮನವಿ ಮಾಡಿದ್ದರು. ವಿಡಿಯೋ ಬಿಡುಗಡೆ ಮಾಡಿದ್ದ ಚಾಲೆಂಜಿಂಗ್​ ಸ್ಟಾರ್​, ಮನೆಯಲ್ಲಿ ಪ್ರಾಣಿ ಸಾಕಲು ಎಲ್ಲರಿಗೂ ಆಗಲ್ಲ. ಆದರೆ, ಮೃಗಾಲಯದಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯಬಹುದು. ಒಂದು ಲವ್ ಬರ್ಡ್‌ಗೆ 1,000 ರೂ., ಹುಲಿಗೆ 1 ಲಕ್ಷ ರೂ. ಹಣ ಕಟ್ಟಬೇಕು. ಒಂದು ವರ್ಷಗಳ ಕಾಲ ಅವುಗಳ ನಿರ್ವಹಣೆಯನ್ನು ದತ್ತು ಪಡೆದವರ ಹೆಸರಿನಲ್ಲಿ ಮಾಡುತ್ತಾರೆ. ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆಯಲು ಝೂ ಆಫ್ ಕರ್ನಾಟಕ ಆ್ಯಪ್ ಮೂಲಕ ಮಾಹಿತಿ ಪಡೆಯಬಹುದು ಅಥವಾ ನಿಮ್ಮ ಸಮೀಪದ ಝೂಗೆ ಭೇಟಿ ನೀಡಿದರೆ, ಅಲ್ಲಿಯೂ ಮಾಹಿತಿ ಪಡೆದುಕೊಳ್ಳಬಹುದು ಎಂದಿದ್ದರು.

ಇದನ್ನೂ ಓದಿ: ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯುವ ‘ಒಡೆಯ’ನಿಗೆ ಅಭಿಮಾನಿಗಳ ಸಾಥ್‌

ದರ್ಶನ್ ಅವರು ಮನವಿ ಮಾಡಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅವರ ಅಭಿಮಾನಿಗಳ ಪ್ರಾಣಿಗಳನ್ನು ದತ್ತು ಪಡೆಯಲು ಮುಂದಾಗಿದ್ದಾರೆ. ಮೈಸೂರಿನ ಶ್ರೀಚಾಮರಾಜೇಂದ್ರ ಮೃಗಾಲಯ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಸೇರಿದಂತೆ ರಾಜ್ಯದ ವಿವಿಧ ಮೃಗಾಲಯಗಳಲ್ಲಿರುವ ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆದುಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.