ಮೈಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹದಲ್ಲಿ ಐವರು ಅಂಗನವಾಡಿ ಕಾರ್ಯಕರ್ತೆಯರು ಅಸ್ವಸ್ಥಗೊಂಡ ಘಟನೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ.
ನಂಜನಗೂಡು ತಾಲ್ಲೂಕಿನ ಮಿನಿ ವಿಧಾನಸೌಧದ ಮುಂದೆ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಈ ವೇಳೆ ಐವರು ಅಂಗನವಾಡಿ ಕಾರ್ಯಕರ್ತೆಯರು ಅಸ್ವಸ್ಥಗೊಂಡಿದ್ದು, ಆಂಬ್ಯುಲೆನ್ಸ್ನಲ್ಲಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಯಿತು.
ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬೇಡಿಕೆಗಳನ್ನು ಈಡೇರಿಸುವಲ್ಲಿ ಆಸಕ್ತಿ ತೋರುತ್ತಿಲ್ಲವೆಂದು ನೊಂದ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದರು.