ETV Bharat / city

'ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ನವೀಕರಣ ಕಡ್ಡಾಯ' - District Health & Family Welfare Officer

ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಕಾರ್ಡ್​​ ಅನ್ನು ಜಿಲ್ಲೆಯ ಎಲ್ಲ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ನಾಗರಿಕರು ಕಡ್ಡಾಯವಾಗಿ ನವೀಕರಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್ ಹೇಳಿದರು.

Ayushman Bharat-Health Karnataka Card renewal
author img

By

Published : Nov 12, 2019, 9:34 PM IST

ಮೈಸೂರು: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್​​ ಅನ್ನು ಜಿಲ್ಲೆಯ ಎಲ್ಲ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ನಾಗರಿಕರು ಕಡ್ಡಾಯವಾಗಿ ನವೀಕರಿಸಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್ ಹೇಳಿದರು.

ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ತಾಲೂಕುಗಳಲ್ಲಿ ಶಿಬಿರಗಳನ್ನು ನಿರ್ಮಿಸಿ ಕಾರ್ಡ್‍ಗಳನ್ನು ನೀಡಲಾಗುವುದು. ಖಾಸಗಿ ಸೇವಾ ಸಿಂಧು ಕೇಂದ್ರಗಳ (common Service center) ಮೂಲಕ ₹10 ಶುಲ್ಕದೊಂದಿಗೆ ಬಿಳಿಯ ಹಾಳೆ ಹಾಗೂ ₹ 35 ಶುಲ್ಕ ನೀಡಿ ಎಆರ್​​ಕೆ-ಪಿವಿಸಿ ಕಾರ್ಡ್​​ ಪಡೆಯಬಹುದು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್

ಕಾರ್ಡ್ ಪಡೆಯುವಾಗ ಸೇವಾ ಕೇಂದ್ರಗಳಲ್ಲಿ ಅಧಿಕವಾಗಿ ಹಣ ಕೇಳಿದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಬೇಕು. ಹೆಚ್ಚಿನ ಮಾಹಿತಿಗೆ 104 ಅಥವಾ 1800 4258330, 7259003400, 9449843060 ಸಂಖ್ಯೆಗಳಿಗೆ ಸಂಪರ್ಕಿಸಬಹುದು. ಎಪಿಎಲ್ ಕಾರ್ಡ್ ಹೊಂದಿರುವವರಿಗೆ ಶೇ.30ರಷ್ಟು ಸರ್ಕಾರವೇ ಆರೋಗ್ಯದ ವೆಚ್ಚ ಭರಿಸಲಿದೆ. ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ಉಚಿತ ಚಿಕಿತ್ಸೆ ದೊರೆಯಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.60ರಷ್ಟು ಸೌಲಭ್ಯಗಳು ಸಿಗಲಿದೆ ಎಂದು ಹೇಳಿದರು.

ಸರ್ಕಾರದ ಆದೇಶದಂತೆ ತುರ್ತು ಸಂದರ್ಭಗಳಲ್ಲಿ ನೇರವಾಗಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ತುರ್ತು ಚಿಕಿತ್ಸೆ ಹೊರತಾಗಿ ಸರ್ಕಾರಿ ಆಸ್ಪತ್ರೆ ಅನುಮತಿ ಇಲ್ಲದೇ ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾದರೆ ಆ ವೆಚ್ಚವನ್ನು ರೋಗಿಯೇ ಭರಿಸಬೇಕು ಎಂದು ತಿಳಿಸಿದರು.

ಈ ಯೋಜನೆಯಡಿ ನೋಂದಣಿಯಾದ ಆಸ್ಪತ್ರೆಗಳು (ಜಿಲ್ಲೆಯಲ್ಲಿ)

  • 26 ಸರ್ಕಾರಿ ಆಸ್ಪತ್ರೆಗಳು
  • 21 ಖಾಸಗಿ ಆಸ್ಪತ್ರೆಗಳು ನೋಂದಣಿ

ಕಾರ್ಡ್​ಗಳ ವಿತರಣೆ

  • ಸರ್ಕಾರಿ ಆಸ್ಪತ್ರೆಗಳಲ್ಲಿ 35,944 ಕಾರ್ಡ್​ಗಳ ವಿತರಣೆ
  • ಖಾಸಗಿ ಸಂಸ್ಥೆಗಳಲ್ಲಿ 2,33,076 ಕಾರ್ಡ್‍ಗಳ ವಿತರಣೆ

ಚಿಕಿತ್ಸೆ ಪಡೆದ ಫಲಾನುವಿಗಳ ಸಂಖ್ಯೆ

  • ಪ್ರಾಥಮಿಕ ಹಂತದ ಚಿಕಿತ್ಸೆ ಪಡೆದ ಫಲಾನುಭವಿಗಳ ಸಂಖ್ಯೆ 8,518
  • ದ್ವಿತೀಯ ಹಂತದ ಚಿಕಿತ್ಸೆ ಪಡೆದ ಫಲಾನುಭವಿಗಳ ಸಂಖ್ಯೆ 2,441
  • ತೃತೀಯ ಹಂತದ ಚಿಕಿತ್ಸೆ ಪಡೆದ ಫಲಾನುಭವಿಗಳ ಸಂಖ್ಯೆ 3,635
  • ತುರ್ತು ಸಂದರ್ಭದಲ್ಲಿ ಚಿಕಿತ್ಸೆ ಪಡೆದ ಫಲಾನುಭವಿಗಳ ಸಂಖ್ಯೆ 4,856

Intro:ಡಿಎಚ್ ಒBody:ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡ್ ಕಡ್ಡಾಯವಾಗಿ ನವೀಕರಿಸಿಕೊಳ್ಳಬೇಕು: ಡಾ.ವೆಂಕಟೇಶ್
ಮೈಸೂರು: ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡ್‍ನ್ನು ಮೈಸೂರು ಜಿಲ್ಲೆಯ ಎಲ್ಲಾ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಎಲ್ಲಾ ನಾಗರಿಕರು ಕಡ್ಡಾಯವಾಗಿ ನವೀಕರಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ವೆಂಕಟೇಶ್ ಅವರು ಹೇಳಿದರು.
ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ವಿನೂತನ ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನಾ ಕುರಿತು ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಆಯೋಜಿಸಿದ್ದ ಪ್ರತಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿದ್ದ ವಿವಿಧ ಆರೋಗ್ಯ ಯೋಜನೆಗಳನ್ನು ಒ ಟ್ಟುಗೂಡಿಸಿ ಎಲ್ಲಾ ಜನರಿಗೂ ಆರೋಗ್ಯ ಸೇವೆಯನ್ನು ಒದಗಿಸುವುದು ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯಡಿ 26 ಸರ್ಕಾರಿ ಆಸ್ಪತ್ರೆಗಳು ಮತ್ತು 21 ಖಾಸಗಿ ಆಸ್ಪತ್ರೆಗಳು ನೋಂದಾಯಿತವಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ 35,944 ಕಾರ್ಡ್‍ಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ 2,33,076 ಕಾರ್ಡ್‍ಗಳನ್ನು ವಿತರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಮೈಸೂರು ಜಿಲ್ಲೆಯಲ್ಲಿ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ಒಟ್ಟು 8,518 ಫಲಾನುಭವಿಗಳಿದ್ದು, ದ್ವಿತೀಯ ಹಂತದ ಚಿಕಿತ್ಸೆಯಲ್ಲಿ 2,441 ತೃತೀಯ ಹಂತದ ಚಿಕಿತ್ಸೆಯಲ್ಲಿ 3,635 ಹಾಗೂ ತುರ್ತು ಚಿಕಿತ್ಸೆಯಲ್ಲಿ 4,856 ಫಲಾನುಭವಿಗಳಿದ್ದಾರೆ ಎಂದು ಅವರು ತಿಳಿಸಿದರು.
ಎಲ್ಲಾ ತಾಲ್ಲೂಕುಗಳಲ್ಲಿ ಶಿಬಿರವನ್ನು ಮಾಡಿ ಸಾಧ್ಯವಾದಷ್ಟು ಕಾರ್ಡ್‍ಗಳನ್ನು ನೀಡಲಾಗುವುದು. ಖಾಸಗಿ ಸೇವಾ ಸಿಂಧು ಕೇಂದ್ರಗಳ (common Service center) ಮೂಲಕ 10/- ರೂ. ಶುಲ್ಕದೊಂದಿಗೆ ಬಿಳಿಯ ಹಾಳೆ ಹಾಗೂ 35/- ರೂ. ಶುಲ್ಕವನ್ನು ನೀಡಿ ಎಆರ್‍ಕೆ-ಪಿವಿಸಿ ಕಾರ್ಡ್‍ನ್ನು ಪಡೆಯಬಹುದು ಎಂದರು.
ಕಾರ್ಡ್ ಪಡೆಯುವಾಗ ಸೇವಾ ಕೇಂದ್ರಗಳಲ್ಲಿ ಅಧಿಕವಾಗಿ ಹಣ ನೀಡುವಂತೆ ಕೇಳುವುದು ಕಂಡು ಬಂದರೆ ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿಗಳು ಮೈಸೂರು, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳು ಅಥವಾ ಎಬಿ-ಎಆರ್‍ಕೆಯ ನೋಡಲ್ ಅಧಿಕಾರಿಗಳಿಗೆ, ಜಿಲ್ಲಾ ಕಾರ್ಯಕ್ರಮ ಸಂಯೋಜಕರು,, ಎಸ್‍ಎಎಸ್‍ಟಿ, ಮೈಸೂರು, ತಾಲ್ಲೂಕು ಆರೋಗ್ಯಾಧಿಕಾರಿಗಳು ಅಥವಾ ತಮ್ಮ ಹತ್ತಿರದ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಹಾಗೂ ಸಮುದಾಯ ಕೇಂದ್ರಗಳಲ್ಲಿ ಸಂಬಂಧ ಪಟ್ಟ ಆಡಳಿತ ವೈದ್ಯಾಧಿಕಾರಿಗಳಿಗೆ ದೂರು ಸಲ್ಲಿಸಬಹುದಾಗಿದ್ದು ಅಂತಹವರ ವಿರುದ್ಧ ಕ್ರಮ ಜರುಗಿಸಲಾಗವುದು. ಹೆಚ್ಚಿನ ಮಾಹಿತಿಗೆ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ 104 ಅಥವಾ 1800-425, 8330 ಮೈಸೂರು ಜಿಲ್ಲಾ ಸಂಯೋಜಕರಾದ ಮಾದೇಗೌಡ ಮೊಬೈಲ್ ಸಂ: 7259003400 ಹಾಗೂ ಕುಟುಂಬ ಮತ್ತು ಆರೋಗ್ಯ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್ ಮೊಬೈಲ್ ನಂ 9449843060 ಸಂಪರ್ಕಿಸಲು ಕೋರಿದ್ದಾರೆ.
ಎಪಿಎಲ್ ಕಾರ್ಡ್ ಹೊಂದಿರುವವರಿಗೆ ಶೇ 30% ಅನ್ನು ಸರ್ಕಾರವೇ ಆರೋಗ್ಯದ ವೆಚ್ಚವನ್ನು ಭರಿಸುವುದು. ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸಂಪೂರ್ಣವಾಗಿ ಎಲ್ಲಾ ಚಿಕಿತ್ಸೆಗಳು ಉಚಿತವಾಗಿ ದೊರೆಯುವುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ. 60 ರಷ್ಟು ಸೌಲಭ್ಯಗಳು ಸಿಗಲಿದ್ದು, ವೈದ್ಯರು ತಪಾಸಣೆ ನಡೆಸಿ ಲಭ್ಯವಿರುವ ಚಿಕಿತ್ಸೆ ನೀಡುತ್ತಾರೆ. ಇಲ್ಲವಾದಲ್ಲಿ ಸಮೀಪದ ತಾಲ್ಲೂಕು ಅಥವಾ ಜಿಲ್ಲಾ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಸೂಚಿಸಲಾಗುವುದು.
ಸರ್ಕಾರದ ಆದೇಶದಂತೆ ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆಗಳಿಗೆ ನೇರವಾಗಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ತುರ್ತು ಚಿಕಿತ್ಸೆ ಹೊರತಾಗಿ ಅರ್ಹತ ರೋಗಿಗಳಾಗಲಿ ಅಥವಾ ಸಾಮಾನ್ಯ ರೋಗಿಗಳಾಗಲಿ ಸರ್ಕಾರಿ ಆಸ್ಪತ್ರೆ ಅನುಮತಿ ಇಲ್ಲದೇ ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾದರೆ ಆ ವೆಚ್ಚವನ್ನು ಸದರಿ ರೋಗಿಯೇ ಭರಿಸಬೇಕು ಎಂದು ತಿಳಿಸಿದ್ದಾರೆ.
ಕೆಪಿಎಂಎಯಲ್ಲಿ ಒಟ್ಟು 213 ಕೇಂದ್ರಗಳಿವೆ, ನರ್ಸಿಂಗ್ ಹೋಂ 64, ಕ್ಲಿನಿಕ್ 14, ಪಾಲಿಕ್ಲಿನಿಕ್ 190, ಡೇಕೇರ್ 52, ಆಸ್ಪತ್ರೆಗಳು 129 ಇವೆ. ಒಂದು ವಾರದೊಳಗೆ ಯಾವ ಆಸ್ಪತ್ರೆಗಳು, ಕೆಪಿಎಂಎ ನೋಂದಾಣಿ ಮಾಡಿಸಿಕೊಳ್ಳದ ಹಾಗೂ ನವೀಕರಣ ಮಾಡಿಸಿಕೊಳ್ಳದವರ ವಿರುದ್ಧ 19/ಎ ಅನ್ವಯ ಕ್ರಿಮಿನಲ್ ಮೊಕದ್ದಮೆ ಹಾಕಲಾಗುವುದು ಎಂದು ಅವರು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿಗಳಾದ ಡಾ. ಶಿರಾಜ್, ಡಾ. ಉಮೇಶ್, ಡಾ. ಶಾಂತಕುಮಾರ್ ಮತ್ತು ಇತರರು ಉಪಸ್ಥಿತರಿದ್ದರುConclusion:ಡಿಎಚ್ಒ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.