ETV Bharat / city

ಅಯೋಧ್ಯೆ ತೀರ್ಪು ಹಿನ್ನೆಲೆ: ದಕ್ಷಿಣ ಕನ್ನಡ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಹೈ ಅಲರ್ಟ್​​ - mysore news

ಅಯ್ಯೋಧ್ಯೆ ತೀರ್ಪನ್ನು ಸುಪ್ರೀಂಕೋರ್ಟ್​ ಇಂದು ಪ್ರಕಟಿಸಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಶಾಂತಿ- ಸುವ್ಯವಸ್ಥೆ ಕಾಪಾಡಲು ಕಟ್ಟೆಚ್ಚರ ವಹಿಸಲಾಗಿದೆ.

ಅಯೋಧ್ಯಾ ತೀರ್ಪು ಹಿನ್ನೆಲೆ...ದಕ್ಷಿಣ ಕನ್ನಡ,ಮೈಸೂರು,ಕೊಡಗು ಜಿಲ್ಲೆಗಳಲ್ಲಿ ಹೈ ಅಲರ್ಟ್​
author img

By

Published : Nov 9, 2019, 10:38 AM IST

ಅಯ್ಯೋಧ್ಯೆ ತೀರ್ಪನ್ನು ಸುಪ್ರೀಂಕೋರ್ಟ್​ ಇಂದು ಪ್ರಕಟಿಸಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕಟ್ಟೆಚ್ಚರ ವಹಿಸಲಾಗಿದೆ.

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್​ ವ್ಯವಸ್ಥೆಗಾಗಿ ಒಂದು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಸೂಕ್ಷ್ಮ, ಅತಿ ಸೂಕ್ಷ್ಮ ಸ್ಥಳಗಳಲ್ಲಿ ವಿಶೇಷವಾದ ಟಿಕೆಟಿಂಗ್ ವ್ಯವಸ್ಥೆ ಮಾಡಲಾಗಿದೆ.

ಅಯೋಧ್ಯೆ ತೀರ್ಪು ಹಿನ್ನೆಲೆ: ದಕ್ಷಿಣ ಕನ್ನಡ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಹೈ ಅಲರ್ಟ್​

ಅಂತರ್ ರಾಜ್ಯ ಗಡಿ ಭಾಗಗಳಲ್ಲಿ ಸೀಲ್ ಮಾಡಿ ಪೊಲೀಸರು ವಿಶೇಷ ತಪಾಸಣೆ ನಡೆಸುತ್ತಿದ್ದಾರೆ. 15 ಮಂದಿ ಇನ್ಸ್‌ಪೆಕ್ಟರ್, 40 ಪೊಲೀಸ್ ಸಬ್ ಇನ್ಸ್‌ಪೆಕ್ಟರ್, 100 ಮಂದಿ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್​ಗಳು, 5 ಕೆಎಸ್​ಆರ್​ಪಿ ತುಕಡಿ, 1 ಕೇಂದ್ರೀಯ ಅರೆ ಸೇನಾಪಡೆ, ಇಬ್ಬರು ಡಿಸಿಪಿಗಳನ್ನ ನಿಯೋಜಿಸಲಾಗಿದೆ.

ಮೈಸೂರು: ಅಯೋಧ್ಯೆ ತೀರ್ಪಿನ ಹಿನ್ನೆಲೆ ಸಾಂಸ್ಕೃತಿಕ ನಗರಿಯ ಪ್ರಮುಖ ಸ್ಥಳಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಶುಕ್ರವಾರ ಮಧ್ಯರಾತ್ರಿಯಿಂದಲೇ ನಗರದ ಪ್ರಮುಖ ಜನನಿಬಿಡ ಸ್ಥಳ, ದೇವಸ್ಥಾನ, ಮಸೀದಿ, ಪ್ರಾರ್ಥನಾ ಮಂದಿರಗಳು ಸೇರಿದಂತೆ ಪ್ರಮುಖ ಆಯಕಟ್ಟಿನ ಸ್ಥಳಗಳಲ್ಲಿ 3000ಕ್ಕೂ ಅಧಿಕ ಪೋಲಿಸರನ್ನು ನಿಯೋಜನೆ ಮಾಡಲಾಗಿದೆ. 144 ಸೆಕ್ಷನ್ ಅನ್ವಯ ಮೈಸೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ವಿಜಯೋತ್ಸವ ಹಾಗೂ ಪ್ರತಿಭಟನೆ ನಿಷೇಧ ಮಾಡಲಾಗಿದೆ.

ಕೊಡಗು: ಅಯೋಧ್ಯೆ ತೀರ್ಪಿನ ಹಿನ್ನೆಲೆ ಜಿಲ್ಲೆಯಾದ್ಯಂತ ಪೊಲೀಸ್ ಹೈಅಲರ್ಟ್ ಘೋಷಿಸಿ, ಎಲ್ಲೆಡೆ ಖಾಕಿ ಕಣ್ಗಾವಲು ಹಾಕಲಾಗಿದೆ.

Intro:ಮಂಗಳೂರು: ಅಯೋಧ್ಯೆ ರಾಮ ಜನ್ಮಭೂಮಿ ಹಾಗೂ ಬಾಬರಿ ಮಸೀದಿ ವಿವಾದದ ಐತಿಹಾಸಿಕ ತೀರ್ಪು ಹೊರಬೀಳುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಪೊಲೀಸ್ ಕಟ್ಟೆಚ್ಚರ ನಿರ್ವಹಿಸಲಾಗಿದೆ.

ನಗರದಾದ್ಯಂತ ಬಿಗಿ ಬಂದೋಬಸ್ತು ವ್ಯವಸ್ಥೆಗಾಗಿ ಸುಮಾರು ಒಂದು ಸಾವಿರದಷ್ಟು ಪೊಲೀಸರನ್ನು ನಿಯೋಜಿಸಲಾಗಿದೆ. ಸೂಕ್ಷ್ಮ , ಅತಿ ಸೂಕ್ಷ್ಮ ಸ್ಥಳಗಳಲ್ಲಿ ಬಹಳ ವಿಶೇಷವಾದ ಟಿಕೆಟಿಂಗ್ ವ್ಯವಸ್ಥೆ ಮಾಡಲಾಗಿದೆ. ಅಂತರ್ ರಾಜ್ಯ ಗಡಿ ಭಾಗಗಳಲ್ಲಿ ಸೀಲ್ ಮಾಡಿ ಪೊಲೀಸರು ವಿಶೇಷ ತಪಾಸಣೆ ನಡೆಸುತ್ತಿದ್ದಾರೆ. 15 ಮಂದಿ ಇನ್ಸ್‌ಪೆಕ್ಟರ್, 40 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ 100 ಮಂದಿ ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಗಳು, 5 ಕೆ ಎಸ್ ಆರ್ ಪಿ ತುಕಡಿ, 1 ಕೇಂದ್ರೀಯ ಅರೆ ಸೇನಾಪಡೆ, ಇಬ್ಬರು ಡಿಸಿಪಿಗಳು ಸೇರಿ ಬಹಳ ಬಿಗಿ ಪೊಲೀಸ್ ಬಂದೋಬಸ್ತು ವ್ಯವಸ್ಥೆ ಕೈಗೊಳ್ಳಲಾಗಿದೆ. ಅಲ್ಲದೆ ನಗರ ಶಸಸ್ತ್ರ ಬಲದ ತುಕಡಿ, ಗೃಹರಕ್ಷಕ ದಳದ ಸಿಬ್ಬಂದಿಯನ್ನೂ ಸಾಕಷ್ಟು ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ.

Body:ಅಲ್ಲದೆ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ,ಟ್ವಿಟರ್, ವಾಟ್ಸಾಪ್ ಗಳ ಮೇಲೂ ಪೊಲೀಸ್ ನಿಗಾ ಇರಿಸಲಾಗಿದೆ ಯಾರೇ ಕೋಮು ಪ್ರಚೋದನಾಕಾರಿ‌ ಸಂದೇಶ ರವಾನೆ ಮಾಡಿದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಎಲ್ಲಾ ರೀತಿಯಲ್ಲೂ ಸನ್ನದ್ಧವಾಗಿದ್ದು, ನಾಗರಿಕರು ಯಾವುದೇ ರೀತಿಯ ಭೀತಿಗೊಳಗಾಗುವ ಅವಶ್ಯಕತೆ ಇಲ್ಲ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಅದೇ ರೀತಿ ಮುನ್ನೆಚ್ಚರಿಕಾ ದೃಷ್ಟಿಯಿಂದ ಇಂದು ಬೆಳಗ್ಗೆ 6 ಗಂಟೆಯಿಂದ ದ.ಕ. ಜಿಲ್ಲೆಯ ಎಲ್ಲಾ ಮದ್ಯದಂಗಡಿ, ವೈನ್ ಶಾಪ್, ಬಾರ್ ಹಾಗೂ ರೆಸ್ಟೋರೆಂಟ್ ಗಳನ್ನು 24 ಗಂಟೆಗಳ ಕಾಲ ಮುಚ್ಚುವಂತೆ
ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶ ನೀಡಿದ್ದಾರೆ.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.