ಮೈಸೂರು : ನಾಯಕತ್ವದ ಜಗಳವಿರುವುದು ಬಿಜೆಪಿಯಲ್ಲಿ ಅಲ್ಲ, ಕಾಂಗ್ರೆಸ್ನಲ್ಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮೈಸೂರಿನಲ್ಲಿ ನಡೆದ ಜನಸೇವಕ ಸಮಾವೇಶ ಉದ್ದೇಶಿಸಿ ಮಾತನಾಡಿದ ಕಟೀಲ್, ಕಾಂಗ್ರೆಸ್ನಲ್ಲಿ ನಾಯಕತ್ವ ಜಗಳವಿದೆ, ಬಿಜೆಪಿಯಲ್ಲಿ ಅಲ್ಲ. ಕಾಂಗ್ರೆಸ್ನಲ್ಲಿ ಸಿದ್ದರಾಮಣ್ಣ ಕುರ್ಚಿಗೆ ಹಾಕಿರುವ ಟವೆಲ್‌ನ ಡಿಕೆಶಿ ಎಳೆಯಲು ನೋಡುತ್ತಿದ್ದಾರೆ.
ಈ ರಾಜ್ಯದಲ್ಲಿ ಹಾಗೂ ದೇಶದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದೆ. ಜನ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುತ್ತಿದ್ದು, ದೇಶಕ್ಕೆ ನರೇಂದ್ರ ಮೋದಿಯವರ ನಾಯಕತ್ವ ಬೇಕು ಎನ್ನುತ್ತಿದ್ದಾರೆ ಎಂದರು.
ಓದಿ: ಬಿಜೆಪಿಗೆ ನಾನು ಹೊಸ ಸೊಸೆ ಬಂದಂತೆ ಬಂದಿದ್ದೇನೆ: ಬಿ.ಸಿ. ಪಾಟೀಲ
ಇನ್ನು, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಹೆಚ್ಚು ಗೆಲುವು ಸಾಧಿಸಿದ್ದಾರೆ. ಮುಂದಿನ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವಂತೆ ತಾಯಿ ಚಾಮುಂಡೇಶ್ವರಿಯಲ್ಲಿ ಪೂಜೆ ಸಲ್ಲಿಸಿದ್ದೇನೆ. ಸಂಕಲ್ಪ ಯಾತ್ರೆ ಇಲ್ಲಿಂದಲೇ ಆರಂಭಿಸೋಣ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗಳಿಸೋಣ ಎಂದರು.