ಮೈಸೂರು : ತನಗಿಂತ ತನ್ನ ಅಕ್ಕನಿಗೆ ದುಬಾರಿ ಬೆಲೆಯ ಮೊಬೈಲ್ ಕೊಡಿಸಿದ್ದಕ್ಕೆ ಕೋಪಗೊಂಡ ಬಾಲಕನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಚ್ ಡಿ ಕೋಟೆಯ ಬೆಳಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕನ ಹೆಸರು ಆದಿತ್ಯ (15). ಈತನ ಅಕ್ಕನಿಗೆ ತಂದೆ ದುಬಾರಿ ಬೆಲೆಯ ಮೊಬೈಲ್ ಕೊಡಿಸಿದ್ದರಂತೆ. ಆದರೆ, ತನಗೆ ಕಡಿಮೆ ಬೆಲೆಯ ಮೊಬೈಲ್ ಕೊಡಿಸಿದ್ದಾರೆ ಎಂದು ಅಕ್ಕನ ಜೊತೆ ಜಗಳ ಮಾಡಿದ್ದಾನೆ. ಇದರಿಂದ ಇವನ ತಂದೆ-ತಾಯಿ ಬಾಲಕನಿಗೆ ಬೈದಿದ್ದಾರೆ. ಇದರಿಂದ ಕೋಪಗೊಂಡ ಈತ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣವೇ ಆತನನ್ನು ಹೆಚ್ ಡಿ ಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಿದ್ರೂ ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಈ ಸಂಬಂಧ ಹೆಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.