ಮೈಸೂರು: ವಧುವಿಗೆ ಕೈಕೊಟ್ಟು ಪ್ರೇಯಸಿಯೊಂದಿಗೆ ವರ ಪರಾರಿಯಾಗಿರುವ ಘಟನೆ ನಗರದ ಕೆ.ಆರ್. ಮೊಹಲ್ಲಾದಲ್ಲಿ ನಡೆದಿದೆ.
ಮೈಸೂರಿನ ಸುಣ್ಣದಕೇರಿಯ ಉಮೇಶ್ ಪರಾರಿಯಾಗಿರುವ ವರ. ಈತನಿಗೆ ಇಂದು ಮದುವೆ ನಿಶ್ಚಯವಾಗಿತ್ತು. ಈ ಹಿನ್ನೆಲೆ ಕುಟುಂಬಸ್ಥರು ಮದುವೆ ಸಿದ್ಧತಾ ಕಾರ್ಯದಲ್ಲಿ ತೊಡಗಿದ್ದರು. ಆದರೆ ಉಮೇಶ್ ಮದುವೆಗೂ ಮುನ್ನವೇ ತಾನು ಪ್ರೀತಿಸಿದ ಹುಡುಗಿಯೊಂದಿಗೆ ಪರಾರಿಯಾಗಿದ್ದಾನೆ.
ಕಲ್ಯಾಣಮಂಟಪದಲ್ಲಿ ವಧುವಿನ ಕುಟುಂಬಸ್ಥರು ಕಂಗಾಲಾಗಿದ್ದು, ಈ ಕುರಿತು ಕೆ.ಆರ್. ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.