ಮೈಸೂರು: ವಿವಾದಿತ ವಿಡಿಯೋ, ಆಡಿಯೋ ವೈರಲ್ ಪ್ರಕರಣ ಸಂಬಂಧ ಎಲೆಕ್ಟ್ರಾನಿಕ್ ಸಾಕ್ಷಿಗಳನ್ನು ಕಲೆಹಾಕಲಾಗುತ್ತಿದೆ. ಈಗಾಗಲೇ ವಿಡಿಯೋದಲ್ಲಿ ಇರುವ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ತಿಳಿಸಿದರು.
ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋದಲ್ಲಿ ಆಕ್ಷೇಪಾರ್ಹ ಹೇಳಿಕೆ ಇದೆ. ಈ ಸಂಬಂಧ ಈಗಾಗಲೇ ದೂರು ದಾಖಲು ಮಾಡಿಕೊಳ್ಳಲಾಗಿದೆ. ಐಪಿಸಿ ಸಕ್ಷನ್ 153-A, 153-B, 505-2 ಹಾಗೂ 34 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ವಿಡಿಯೋದಲ್ಲಿ ಮಾತುಗಳನ್ನಾಡಿದ ವ್ಯಕ್ತಿಗಳ ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದರು.
ಸಮಾಜದ ಶಾಂತಿಗೆ ಭಂಗ ತರುವ ಹಾಗೂ ದೇಶದ್ರೋಹ ಹೇಳಿಕೆ ನೀಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಈ ಕೃತ್ಯಕ್ಕೆ ಕಾರಣ, ಉದ್ದೇಶ ಹಾಗೂ ಹಿನ್ನೆಲೆಯ ಬಗ್ಗೆ ಸಹ ತನಿಖೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಚೋಟಾ ಪಾಕಿಸ್ತಾನ್ ಆಡಿಯೋ ವೈರಲ್.. ಎಫ್ಐಆರ್ ದಾಖಲು, ಪರಿಶೀಲಿಸಿ ಕ್ರಮ ಎಂದ ಸಿಎಂ