ಮೈಸೂರು : ಅಂತಿಮ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ 16 ದಿನಗಳ ಪಾಠ ಮಾಡಿ ಧೈರ್ಯ ತುಂಬಲಾಗುವುದು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ ಹೇಮಂತ್‌ಕುಮಾರ್ ತಿಳಿಸಿದ್ದಾರೆ.
ಸೆಪ್ಟೆಂಬರ್ ಅಂತ್ಯದೊಳಗೆ ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಗಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿರುವುದರಿಂದ ಅಧ್ಯಯನ ಕೇಂದ್ರಗಳ ಮುಖ್ಯಸ್ಥರನ್ನ ಕರೆದು ಚರ್ಚೆ ಮಾಡಿ ಮೂರು ವಾರಗಳ ಕಾಲ ವಿದ್ಯಾರ್ಥಿಗಳಿಗೆ ಪಾಠ ಮಾಡಲು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ ಎಂದರು.
ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಬರುವುದರಿಂದ ಆಯಾ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರ ತೆರೆದು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲ ಮಾಡಿ ಕೊಡಲಾಗುವುದು. ಪ್ರಥಮ ವರ್ಷದ ಪದವಿ ಪ್ರವೇಶಕ್ಕೆ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.