ಮೈಸೂರು: ನವೆಂಬರ್ 2 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಬಿನಿ ಹಾಗೂ ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಆಗಮಿಸಿ ಬಾಗಿನ ಅರ್ಪಿಸಲಿದ್ದಾರೆ.
ನಂತರ ಹೆಲಿಕಾಪ್ಟರ್ ಮೂಲಕ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕು ಕೆಅರ್ ಸಾಗರಕ್ಕೆ 12.45 ಕ್ಕೆ ಆಗಮಿಸಿ ಶ್ರೀ ಕಾವೇರಿ ಮಾತೆಯ ಪೂಜೆ ಮತ್ತು ಕೃಷ್ಣರಾಜ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯ 84 ಅಡಿ ನೀರನ್ನು ಸಂಗ್ರಹ ಸಾಮರ್ಥ್ಯವಿದೆ. ಕೇರಳದ ವೈನಾಡು ಪ್ರದೇಶದಲ್ಲಿ ಸತತವಾಗಿ ಮಳೆ ಆಗುತ್ತಿದ್ದು, ಸಂಪೂರ್ಣ ಭರ್ತಿಯಾಗಿದೆ.
![CM BASAVARAJ BOMMAI WILL OFFERING BAGINA TO KRS ON Nov 2](https://etvbharatimages.akamaized.net/etvbharat/prod-images/kn-mys-04-cmbageenanews-7208092_30102021210810_3010f_1635608290_871.jpg)
ಇನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಅರ್ಎಸ್ ಆಣೆಕಟ್ಟು 124.80 ಅಡಿ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯ ತಲುಪಿದ್ದು, ಸಂಪೂರ್ಣ ಭರ್ತಿಯಾಗಿದೆ. ಕಳೆದ 15 ದಿನಗಳಲ್ಲಿ ಕೊಡಗು ಹಾಗೂ ಜಲಾಶಯದ ಪಾತ್ರಗಳಲ್ಲಿ ಅತಿ ಹೆಚ್ಚು ಮಳೆಯಾದ್ದರಿಂದ ನವೆಂಬರ್ ತಿಂಗಳಲ್ಲಿ ತುಂಬಿರುವುದು ವಿಶೇಷವಾಗಿದೆ. ಈ ಹಿನ್ನೆಲೆಯಲ್ಲಿ ಕಬಿನಿ ಮತ್ತು ಕೆಆರ್ಎಸ್ಗೆ ಸಿಎಂ ಬಾಗಿನ ಅರ್ಪಿಸಲಿದ್ದಾರೆ.