ETV Bharat / city

ಚಾಮರಾಜನಗರಕ್ಕೆ ಸಿಎಂ ಬಂದೇ ಬರ್ತಾರೆ: ಸಚಿವ ಎಸ್.ಟಿ.ಸೋಮಶೇಖರ್ - ಮೈಸೂರು ದಸರಾ 2021

ಅ.7 ರಂದು ಸಿಎಂ ಬೊಮ್ಮಾಯಿ ದಸರಾ ಉದ್ಘಾಟನೆಯಲ್ಲಿ ಪಾಲ್ಗೊಳ್ಳುತ್ತಾರೆ. ಬಳಿಕ ಏರ್‌ಪೋರ್ಟ್‌ನಲ್ಲಿ ರಾಷ್ಟ್ರಪತಿ ರಾಮ್​ ನಾಥ್​ ಕೋವಿಂದ್​ ಅವರನ್ನು ಸ್ವಾಗತಿಸಿ ಚಾಮರಾಜನಗರ ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.

ಸಚಿವ ಎಸ್.ಟಿ.ಸೋಮಶೇಖರ್
ಸಚಿವ ಎಸ್.ಟಿ.ಸೋಮಶೇಖರ್
author img

By

Published : Oct 1, 2021, 11:20 AM IST

ಮೈಸೂರು: ಚಾಮರಾಜನಗರ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದೇ ಬರುತ್ತಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ದೃಢಪಡಿಸಿದ್ದಾರೆ.

ಅರಮನೆ ಆವರಣದಲ್ಲಿ ಮಾಧ್ಯಮಗಳೊಂದಿಗೆ ಸಚಿವ ಸೋಮಶೇಖರ್

ದಸರಾ ಸಂಬಂಧ ಅರಮನೆ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್, ಅಕ್ಟೋಬರ್ 6 ರಂದು ಸಿಎಂ ಬೊಮ್ಮಾಯಿ ಮೈಸೂರಿನಲ್ಲಿ ವಾಸ್ತವ್ಯ ಹೂಡಿ, ಅ.7 ರಂದು ದಸರಾ ಉದ್ಘಾಟನೆಯಲ್ಲಿ ಪಾಲ್ಗೊಳ್ಳುತ್ತಾರೆ. ಬಳಿಕ ಏರ್‌ಪೋರ್ಟ್‌ನಲ್ಲಿ ರಾಷ್ಟ್ರಪತಿ ರಾಮ್​ ನಾಥ್​ ಕೋವಿಂದ್​ ಅವರನ್ನು ಸ್ವಾಗತಿಸಿ ಚಾಮರಾಜನಗರ ಜಿಲ್ಲೆಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: RSS - Taliban ನಡುವೆ ಇರುವ ವ್ಯತ್ಯಾಸವನ್ನ ಸಿದ್ದರಾಮಯ್ಯ ಅರ್ಥಮಾಡಿಕೊಳ್ಳಬೇಕು: ಗೃಹ ಸಚಿವ

ದಸರಾಗೆ ಎಲ್ಲ ತಯಾರಿ ನಡೆದಿದೆ. ಸಂಜೆ ಒಳಗಡೆ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿ ಅಂತಿಮವಾಗಲಿದೆ. ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ ನಾಡಿನ ಹಲವು ಕಲಾವಿದರಿಗೆ ಆಮಂತ್ರಣ ನೀಡಲಾಗುತ್ತದೆ. ಉದ್ಘಾಟನೆಗೆ 500 ಹಾಗೂ ಜಂಬೂ ಸವಾರಿಗೆ 1000 ಜನ ಮಾತ್ರ ಪಾಲ್ಗೊಳ್ಳಬಹುದು ಎಂದು ತಜ್ಞರ ಸಮಿತಿ ಹೇಳಿದೆ. ಹೆಚ್ಚು ಜನ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಮನವಿ ಮಾಡಿದ್ದೇನೆ ಎಂದರು.

ಸಿದ್ದರಾಮಯ್ಯ RSS ಶಾಖೆಗೆ ಬರಲಿ

ಪ್ರತಿಪಕ್ಷ ಬಾಯಕ ಸಿದ್ದರಾಮಯ್ಯಗೆ ಕೋವಿಡ್ ಬಂದ ಮೇಲೆ ತಾವು ಏನು ಮಾತನಾಡುತ್ತಿದ್ದೇನೆ ಎಂಬುದೇ ಗೊತ್ತಾಗುತ್ತಿಲ್ಲ. ಯಾವುದಕ್ಕೂ ಸಂಬಂಧವಿಲ್ಲದೇ ಏನೇನೋ ಮಾತಾಡ್ತಿದ್ದಾರೆ. ಆರ್​​ಎಸ್​​ಎಸ್ ಬಗ್ಗೆ ತಿಳಿಯಬೇಕಾದರೆ ಅವರು ಯಾವುದಾದರೂ ಆರ್​​ಎಸ್​​ಎಸ್ ಶಾಖೆಗೆ ಬರಲಿ. ಅವರು ಬರುವುದಾದರೆ ನಾನೇ ಅವರನ್ನು ಖುದ್ದಾಗಿ ಒಂದು ಶಾಖೆಗೆ ಕರೆದುಕೊಂಡು ಹೋಗ್ತೀನಿ. ಅವರಿಗೆ ಮಾನಸಿಕವಾಗಿ ಏನಾಗಿದೆ ಎಂಬುವುದು ನನಗೆ ಗೊತ್ತಿಲ್ಲ. ಬೇಕಾದರೆ ತಿಳಿದುಕೊಂಡು ಹೇಳುತ್ತೀನಿ ಎಂದು ಲೇವಡಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.