ETV Bharat / city

ಅನರ್ಹ ಶಾಸಕರಿಗೂ ಮಂತ್ರಿ ಸ್ಥಾನ ಖಚಿತ: ಸಂಸದ ವಿ.ಶ್ರೀನಿವಾಸ್ ಪ್ರಸಾದ್ - ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿಎಂ ಬಿ.ಎಸ್​.ಯಡಿಯೂರಪ್ಪ ಅವರು ಹೇಳಿದ ಮಾತಿನಂತೆ ಸುಪ್ರೀಂಕೋರ್ಟ್ ಆದೇಶ ಬಂದ 10 ದಿನದೊಳಗೆ ಅನರ್ಹ ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗುವುದು ಎಂದು ಸಂಸದ ವಿ.‌ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

Minister position for Disqualify lawmaker
author img

By

Published : Aug 23, 2019, 10:06 PM IST

ಮೈಸೂರು: ಅನರ್ಹ ಶಾಸಕರ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶ ಬಂದ 10ದಿನದೊಳಗೆ ಮಂತ್ರಿ ಸ್ಥಾನ ಕೊಡುವುದಾಗಿ ಸಿಎಂ ಬಿ.ಎಸ್​.ಯಡಿಯೂರಪ್ಪನವರೇ ಅನರ್ಹರಿಗೆ ಭರವಸೆ ನೀಡಿದ್ದಾರೆ ಎಂದು ಸಂಸದ ವಿ.‌ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಪರೇಷನ್ ಕಮಲ ನಡೆದಿಲ್ಲ. ಸ್ವಇಚ್ಛೆಯಿಂದಲೇ ಎಲ್ಲರೂ ಬಂದಿದ್ದಾರೆ. ಅವರನ್ನು ಸ್ವಿಕರ್ ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​​ನಲ್ಲಿ ಕೇಸ್ ದಾಖಲಿಸಿದ್ದಾರೆ. ಇದು ಇತ್ಯರ್ಥವಾದ 10 ದಿನದಲ್ಲಿ ಸಚಿವ ಸ್ಥಾನ ಕೊಡುವುದಾಗಿ ಸಿಎಂ ಹೇಳಿಕೆ ನೀಡಿದ್ದಾರೆ. ಅವರೆಲ್ಲರೂ ಮಂತ್ರಿಗಳಾಗುತ್ತಾರೆ ಎಂದು ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.

ದಸರಾ ಹಿನ್ನಲೆಯಲ್ಲಿ ಮೈಸೂರು ಉಸ್ತುವಾರಿ ಸಚಿವರಾಗಿ ವಿ.ಸೋಮಣ್ಣ ನೇಮಕವಾಗಿದ್ದಾರೆ. ಸಚಿವ ಸಂಪುಟದಲ್ಲಿ 17 ಮಂದಿಗೆ ಸ್ಥಾನ ಸಿಕ್ಕಿದೆ. ಉಳಿದ ಸ್ಥಾನಗಳಿಗೆ ಭರ್ತಿಗೆ ಸಂಬಂಧಿಸಿದಂತೆ ಸಿಎಂ ಹೈಕಮಾಂಡ್ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಈಗ ಅನರ್ಹರೂ ದೆಹಲಿಯಲ್ಲಿದ್ದು, ಅಲ್ಲಿಯೇ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುತ್ತಾರೆ ಎಂದರು.

ಸಂಸದ ವಿ.ಶ್ರೀನಿವಾಸ್ ಪ್ರಸಾದ್

ಇನ್ನೂ ಹೆಚ್‌ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ಮತ್ತು ದೇವೇಗೌಡ ಇಬ್ಬರೂ ಬೆನ್ನಿಗೆ ಚೂರಿ ಹಾಕುವವರು. ಹಾಗಯೇ ಮೇಲೆ ಬಂದವರು. ಈಗ ಪರಸ್ಪರ ಮಾತಿನ ವಾಗ್ದಾಳಿ ನಡೆಸುತ್ತಿದ್ದಾರೆ. ಇದನ್ನು ನೋಡಿದರೆ ಜನರು ಅಸಹ್ಯ ಪಟ್ಟುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

Intro:ಮೈಸೂರು: ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟ್ ಆದೇಶ ಬಂದ ೧೦ ದಿನದ ಒಳಗೆ ಮಂತ್ರಿ ಸ್ಥಾನ ಕೊಡುತ್ತೇವೆ ಎಂದು ಸಿಎಂ ಅವರೆ ಅನರ್ಹ ಶಾಸಕರಿಗೆ ಭರವಸೆ ನೀಡಿದ್ದಾರೆ ಎಂದು ಸಂಸದ ವಿ.‌ಶ್ರೀನಿವಾಸ್ ಪ್ರಸಾದ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.Body:

ಇಂದು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಬಿಜೆಪಿಯ ಹಿರಿಯ ಉಪಾಧ್ಯಕ್ಷ ಹಾಗೂ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ರಾಜ್ಯದಲ್ಲಿ ಅಪರೇಷನ್ ಕಮಲ ನಡೆದಿಲ್ಲ, ಸ್ವ ಇಚ್ಛೆಯಿಂದಲೇ ಎಲ್ಲರೂ ಬಂದಿದ್ದಾರೆ. ಅವರನ್ನು ಸ್ವಿಕರ್ ೧ ದೇ ದಿನ ಅನರ್ಹಗೊಳಿಸಿ ತೀರ್ಪು ನೀಡಿದ್ದಾರೆ.‌ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ನಲ್ಲಿ ಕೇಸ್ ದಾಖಲಿಸಿದ್ದಾರೆ. ಈ ಕೇಸ್ ಇತ್ಯರ್ಥವಾದ ೧೦ ದಿನದ ಒಳಗೆ ಅನರ್ಹ ಶಾಸಕರಿಗೂ ಸುಪ್ರೀಂ ಆದೇಶವನ್ನು ನೋಡಿ ಮಂತ್ರಿ ಸ್ಥಾನವನ್ನು ನೀಡುತ್ತೆವೆ ಎಂದು ಸ್ವತಃ ಮುಖ್ಯಮಂತ್ರಿಗಳೆ ಹೇಳಿಕೆ ನೀಡಿದ್ದಾರೆ. ಅವರೆಲ್ಲರೂ ಮಂತ್ರಿಗಳಾಗುತ್ತಾರೆ ಎಂದು ಸಂಸದ ವಿ.‌ಶ್ರೀನಿವಾಸ್ ಪ್ರಸಾದ್ ಹೇಳಿಕೆ ನೀಡಿದ್ದು, ದಸರ ಹಿನ್ನಲೆಯಲ್ಲಿ ಮೈಸೂರು ಉಸ್ತುವಾರಿ ಸಚಿರಾಗಿ ವಿ.ಸೋಮಣ್ಣ ನೇಮಕವಾಗಿದ್ದಾರೆ ಅಧಿಕಾರಿಗಳ ಜೊತೆ ಸೇರಿಕೊಂಡು ದಸರ ನಡೆಸಲಿದ್ದಾರೆ ಎಂದ ಅವರು ಸಂವಿಧಾನದ ಪ್ರಕಾರ ಮಂತ್ರಿ ಮಂಡಲ ರಚನೆ ಮಾಡುವುದು ಮುಖ್ಯಮಂತ್ರಿಗಳಿಗೆ ಸೇರಿದ್ದು ಅವರು ಈಗ ೧೭ ಜನ ಸಚಿವರನ್ನಾಗಿ ಮಾಡಿದ್ದಾರೆ, ಉಳಿದ ಸಚಿವರಾಗಿ ಯಾರನ್ನು ಮಾಡಬೇಕು ಎಂಬ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸಿ ತಿರ್ಮಾನ ಮಾಡುತ್ತಾರೆ. ‌ಅನರ್ಹರು ಈಗ ದೆಹಲಿಯಲ್ಲಿದ್ದು ಅಲ್ಲಿ ಮಾತುಕತೆ ನಡೆಸಿದ ನಂತರ ಎಲ್ಲವನ್ನೂ ಅಲ್ಲೆ ಕೂತು ಚರ್ಚೆ ಮಾಡುತ್ತಾರೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಾರೆ ಎಂದರು.
ಇನ್ನೂ ಜೆಡಿಎಸ್ ವರಿಷ್ಠ ಹೆಚ್‌ಡಿ.ದೇವೇಗೌಡ ಹಾಗೂ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯ ಮತ್ತು ದೇವೇಗೌಡರು ಇಬ್ಬರು ಬೆನ್ನಿಗೆ ಚೂರಿ ಹಾಕುವವರೆ ಇವರು ಒಬ್ಬರಿಗೆ ಒಬ್ಬರು ಚೂರಿ ಹಾಕಿಕೊಂಡೆ ಮೇಲೆ ಬಂದವರು ಈಗ ಪರಸ್ಪರ ಮಾತಿನ ವಾಗ್ದಾಳಿ ನಡೆಸುತ್ತಿದ್ದಾರೆ ಇದನ್ನು ನೋಡಿದರೆ ಜನರು ಅಸಹ್ಯ ಪಟ್ಟುಕೊಳ್ಳುತ್ತಿದ್ದಾರೆ. ಈಗಾಲಾದರು ಗಂಭೀರವಾಗಿ ಇರುವುದನ್ನು ಕಲಿಯಿರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.