ಮೈಸೂರು: ಜಿಲ್ಲೆಯಲ್ಲಿಂದು 204 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಐವರು ಸಾವನ್ನಪ್ಪಿದ್ದಾರೆ.
ಒಂದೇ ದಿನ 302 ಮಂದಿ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು 1,517 ಮಂದಿ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ 142 ಮಂದಿ ಕೊರೊನಾಗೆ ಪ್ರಾಣ ಕಳೆದುಕೊಂಡಿದ್ದು 2,558 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.