ಮೈಸೂರು/ಚಾಮರಾಜನಗರ: ಕೊರೊನಾ ವೈರಸ್ ಹಿನ್ನೆಲೆ ರಾಜ್ಯದ ಮೃಗಾಲಯಗಳನ್ನು ಮಾ.15 ರಿಂದ 23ರವರೆಗೆ ಬಂದ್ ಮಾಡುವಂತೆ ಕರ್ನಾಟಕ ಮೃಗಾಲಯ ಪ್ರಾಧಿಕಾರ ಆದೇಶ ಹೊರಡಿಸಿದೆ.
ಮೈಸೂರು, ಬನ್ನೇರುಘಟ್ಟ, ಶಿವಮೊಗ್ಗ, ಗದಗ, ಚಿತ್ರದುರ್ಗ, ಬೆಳಗಾವಿ, ಕಲಬುರ್ಗಿ ಹಾಗೂ ಹಂಪಿಯಲ್ಲಿರುವ ಮೃಗಾಲಯಗಳನ್ನು ಬಂದ್ ಮಾಡಿ ಸಾರ್ವಜನಿಕರ ಆರೋಗ್ಯಕ್ಕೆ ಸಹಕಾರ ನೀಡುವಂತೆ ಮನವಿ ಮಾಡಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಂದು ವಾರ ಮಾಲ್, ಥಿಯೇಟರ್, ಕ್ಲಬ್ ಸೇರಿದಂತೆ ಸಾರ್ವಜನಿಕರು ಸೇರುವ ಸ್ಥಳಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಿದೆ. ಇದರಿಂದ ಮೈಸೂರಿನ ಪ್ರವಾಸಿ ತಾಣಗಳು ಪ್ರವಾಸಿಗರಿಲ್ಲದೇ ಬೀಕೋ ಎನ್ನುತ್ತಿವೆ.