ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದ್ವಿಗುಣಗೊಂಡು ಎರಡು ಸಾವಿರದ ಗಡಿ ದಾಟಿದ್ದು, ಕಠಿಣ ನಿರ್ಬಂಧ ಕೈಗೊಳ್ಳುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಆರಂಭವಾಗಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ಆರೋಗ್ಯ ಸಚಿವ ಸುಧಾಕರ್ ಸೇರಿದಂತೆ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಭಾಗಿಯಾಗಿದ್ದಾರೆ.
ಕೊರೊನಾ ಪಾಸಿಟಿವಿಟಿ ದರ ಇಂದು ದಿಢೀರ್ ಏರಿಕೆಯಾಗಿದ್ದು, ಒಂದೇ ದಿನದಲ್ಲಿ ಶೇ.1.6 ರಿಂದ ಶೇ.2.59 ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ದರ ಶೇ.3 ರಷ್ಟು ಏರಿಕೆ ಆದರೆ ಲಾಕ್ಡೌನ್ ಮಾಡುವಂತೆ ತಜ್ಞರು ಶಿಫಾರಸು ಮಾಡಿದ್ದು, ತಜ್ಞರ ಸಲಹೆ ಮೇರೆಗೆ ಇಂದು ಯಾವ ನಿರ್ಧಾರ ಕೈಗೊಳ್ಳಬೇಕು ಎನ್ನುವ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.
ನೈಟ್ ಕರ್ಫ್ಯೂ ಸಮಯ ವಿಸ್ತರಣೆ, ವೀಕೆಂಡ್ ಕರ್ಫ್ಯೂ, ವೀಕೆಂಡ್ ಲಾಕ್ ಡೌನ್, ವಾಣಿಜ್ಯ ಚಟುವಟಿಕೆಗಳಿಗೆ ಶೇ.50 ನಿರ್ಬಂಧ ಸೇರಿದಂತೆ ಯಾವೆಲ್ಲಾ ರೀತಿಯ ನಿರ್ಬಂಧ ಹೇರಬೇಕು ಎನ್ನುವ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗ್ತಿದೆ.
(ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಸಿನಿಮೀಯ ಘಟನೆ.. 22 ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗಳು..)