ETV Bharat / city

ಮೈಸೂರಿನಲ್ಲಿ ಇಂದ್ರಜಿತ್ ಲಂಕೇಶ್ ವಿರುದ್ಧ ದರ್ಶನ್ ಅಭಿಮಾನಿಗಳ ಪ್ರತಿಭಟನೆ - ಇಂದ್ರಜಿತ್ ಲಂಕೇಶ್ ವಿರುದ್ಧ ದರ್ಶನ್ ಅಭಿಮಾನಿಗಳ ಪ್ರತಿಭಟನೆ

ಮೈಸೂರು ಪೊಲೀಸರಿಗೆ ಬಳೆ ತೊಟ್ಟುಕೊಳ್ಳಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಇಂದ್ರಜಿತ್ ಲಂಕೇಶ್ ವಿರುದ್ಧ ದರ್ಶನ್ ಅಭಿಮಾನಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Darshan fans protest
ಮೈಸೂರಿನಲ್ಲಿ ಇಂದ್ರಜಿತ್ ಲಂಕೇಶ್ ವಿರುದ್ಧ ಪ್ರತಿಭಟನೆ
author img

By

Published : Dec 19, 2021, 1:05 PM IST

ಮೈಸೂರು: ನಟ ದರ್ಶನ್ ವಿರುದ್ಧ ಮಾತನಾಡಿದ್ದ ಇಂದ್ರಜಿತ್ ಲಂಕೇಶ್ ಕ್ಷಮೆ ಕೇಳಬೇಕೆಂದು ಒತ್ತಾಯಿಸಿ ಮೈಸೂರಿನ ಎಂಜಿ ರಸ್ತೆಯ ದಿವಾನ್ ಪೂರ್ಣಯ್ಯ ಛತ್ರದ ಬಳಿ ದರ್ಶನ್ ಅಭಿಮಾನಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮಹಾನಗರ ನಗರ ಪಾಲಿಕೆ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಇಂದ್ರಜಿತ್ ಲಂಕೇಶ್ ಫ್ಲೆಕ್ಸ್‌ಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ನಟ ದರ್ಶನ್ ವಿರುದ್ಧ ಮಾತನಾಡಿದ್ದ ಇಂದ್ರಜಿತ್ ಲಂಕೇಶ್ ಕ್ಷಮೆ ಕೇಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮೈಸೂರಿನಲ್ಲಿ ಇಂದ್ರಜಿತ್ ಲಂಕೇಶ್ ವಿರುದ್ಧ ಪ್ರತಿಭಟನೆ

ಮೈಸೂರು ಪೊಲೀಸರಿಗೆ ಬಳೆ ತೊಟ್ಟುಕೊಳ್ಳಿ ಎಂದು ಇಂದ್ರಜಿತ್ ಲಂಕೇಶ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕನ್ನಡ ಚಳವಳಿ ಕೇಂದ್ರ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಇಂದು ಇಂದ್ರಜಿತ್ ಲಂಕೇಶ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜೇಂದ್ರ ಸಭಾಂಗಣದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.