ಮೈಸೂರು: ರಾಜ್ಯದ ವಿವಿಧ ಮೃಗಾಲಯಗಳಲ್ಲಿರುವ ಪ್ರಾಣಿಗಳನ್ನು ದತ್ತು ಪಡೆದಿರುವ ಅಭಿಮಾನಿಗಳಿಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧನ್ಯವಾದ ಸಲ್ಲಿಸಿದ್ದಾರೆ.
ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಿಗೆ ಜನರು ಬಾರದೇ ಇರುವುದರಿಂದ ರಾಜ್ಯದ ವಿವಿಧ ಮೃಗಾಲಯದಲ್ಲಿರುವ ಪ್ರಾಣಿಗಳಿಗೆ ತೊಂದರೆಯಾಗಿದೆ. ಹೀಗಾಗಿ, ಮೃಗಾಲಯದಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯುವಂತೆ ದರ್ಶನ್ ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿದ್ದರು.
ನೆಚ್ಚಿನ ನಟನ ಮನವಿಗೆ ಸ್ಪಂದಿಸಿದ ಅಭಿಮಾನಿಗಳು ಹಾಗೂ ಪ್ರಾಣಿ ಪ್ರಿಯರು ಮೃಗಾಲಯದಲ್ಲಿರುವ ಪ್ರಾಣಿಗಳನ್ನು ದತ್ತು ಪಡೆದಿದ್ದಾರೆ. ಒಟ್ಟು 17 ಲಕ್ಷ ರೂ. ದೇಣಿಗೆ ಸಂಗ್ರಹವಾಗಿದ್ದು, ಕರ್ನಾಟಕ ಮೃಗಾಲಯ ಪ್ರಾಧಿಕಾರ ದರ್ಶನ್ಗೆ ಧನ್ಯವಾದ ತಿಳಿಸಿದೆ.
ಇದನ್ನೂ ಓದಿ: ಪುಸ್ತಕ ಹಿಡಿಯುವ ಕೈಯ್ಯಲ್ಲಿ ಮದ್ಯದ ಲೋಟ, ಸಾಲದ್ದಕ್ಕೆ ಬಾಡೂಟ: ವಿಡಿಯೋ ವೈರಲ್