ETV Bharat / city

ಮೈಸೂರಿನ ಶಿಥಿಲಾವಸ್ಥೆಯ ಎರಡು ಪಾರಂಪರಿಕ ಕಟ್ಟಡಗಳ ನೆಲಸಮಕ್ಕೆ ನಿರ್ಧಾರ

ಕೆಲವು ಸಮಿತಿ ಸದಸ್ಯರು ಪಾರಂಪರಿಕ ಕಟ್ಟಡಗಳನ್ನು ನೆಲಸಮಗೊಳಿಸದೇ ಕಟ್ಟಡಗಳನ್ನು ಯಥಾಸ್ಥಿತಿ ಉಳಿಸಿಕೊಂಡು ದುರಸ್ತಿಗೊಳಿಸಿ ಸಂರಕ್ಷಿಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ..

Devaraja Market of Mysore
ದೇವರಾಜ ಮಾರುಕಟ್ಟೆ
author img

By

Published : Apr 15, 2022, 2:08 PM IST

ಮೈಸೂರು : ನಗರದ ಪಾರಂಪರಿಕ ಕಟ್ಟಡಗಳಾದ ನೂರು ವರ್ಷಗಳಿಗೂ ಹಳೆಯದಾದ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್ ಡೌನ್ ಬಿಲ್ಡಿಂಗ್​ಗಳನ್ನು ನೆಲಸಮಗೊಳಿಸಿ, ಮೂಲ ವಿನ್ಯಾಸ ಉಳಿಸಿಕೊಂಡು ಪಾರಂಪರಿಕ ವಿನ್ಯಾಸದ ಶೈಲಿಯಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಮಾಡಲು ಜಿಲ್ಲಾ ಪಾರಂಪರಿಕ ಸಮಿತಿಯು ನಿರ್ಧಾರ ಕೈಗೊಂಡಿದೆ.

Lans down Building
ಲ್ಯಾನ್ಸ್ ಡೌನ್ ಬಿಲ್ಡಿಂಗ್

ಮೈಸೂರು ನಗರದ ಮಧ್ಯೆ ಭಾಗದಲ್ಲಿರುವ ನೂರು ವರ್ಷಗಳಿಗೂ ಹಳೆಯದಾದ ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್ ಡೌನ್ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿರುವುದರಿಂದ ಕಟ್ಟಡಗಳನ್ನು ನೆಲಸಮಗೊಳಿಸಿ, ಮೂಲ‌ ಪಾರಂಪರಿಕ ವಿನ್ಯಾಸ ಹಾಗೂ ಶೈಲಿಯನ್ನು ಬಳಸಿಕೊಂಡು ಹೊಸ ಕಟ್ಟಡ ನಿರ್ಮಾಣ ಮಾಡಲು ಜಿಲ್ಲಾ ಪಾರಂಪರಿಕ ಸಮಿತಿ ನಿರ್ಧರಿಸಿದೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಸಮಿತಿಯ ಅಧ್ಯಕ್ಷರಾದ ಬಗಾದಿ ಗೌತಮ್ ಅವರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ‌. ನೂರಾರು ವರ್ಷಗಳ ಹಳೆಯ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್ ಡೌನ್ ಬಿಲ್ಡಿಂಗ್ ಶಿಥಿಲಾವಸ್ಥೆಯಲ್ಲಿದ್ದು, ಈಗಾಗಲೇ ಕೆಲವು ಭಾಗಗಳು ಕುಸಿದು ಬಿದ್ದು ಸಾವು-ನೋವುಗಳಾವೆ.

ಹಾಗಾಗಿ, ತಜ್ಞರು ಕಟ್ಟಡಗಳು ಶಿಥಿಲಾವಸ್ಥೆಯಲ್ಲಿರುವುದರಿಂದ ಅಲ್ಲಿ ವ್ಯಾಪಾರ ಚಟುವಟಿಕೆ ನಡೆಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದರು. ಈಗ ಆ ಕಟ್ಟಡಗಳನ್ನು ನೆಲಸಮ ಮಾಡಿ ಹಳೆ ಪಾರಂಪರಿಕ ಶೈಲಿ ಹಾಗೂ ವಿನ್ಯಾಸದಲ್ಲಿ ಹೊಸ ಕಟ್ಟಡವನ್ನು ನಿರ್ಮಾಣ ಮಾಡಲು ಸಭೆಯಲ್ಲಿ ಸಮಿತಿ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಕೆಲವು ಸಮಿತಿ ಸದಸ್ಯರು ಪಾರಂಪರಿಕ ಕಟ್ಟಡಗಳನ್ನು ನೆಲಸಮಗೊಳಿಸದೇ ಕಟ್ಟಡಗಳನ್ನು ಯಥಾಸ್ಥಿತಿ ಉಳಿಸಿಕೊಂಡು ದುರಸ್ತಿಗೊಳಿಸಿ ಸಂರಕ್ಷಿಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಆದರೆ, ಸಮಿತಿ ಸಭೆಯಲ್ಲಿ ಬಹುತೇಕ ಸದಸ್ಯರು ಅಪಾಯ ಮಟ್ಟದಲ್ಲಿರುವ ಸದೃಢತೆ ಕಳೆದುಕೊಂಡಿರುವ ದೇವರಾಜ ಮಾರುಕಟ್ಟೆ ಹಾಗೂ ಲಾನ್ಸ್ ಡೌನ್ ಬಿಲ್ಡಿಂಗ್ ಅನ್ನು ದುರಸ್ತಿಗೊಳಿಸಲು ಸಾಧ್ಯವಿಲ್ಲ, ಇದರಿಂದ ಜನರ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇದೆ. ಹಾಗಾಗಿ, ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಾರಂಪರಿಕ ಸಮಿತಿ ತೆಗೆದುಕೊಂಡ ನಿರ್ಧಾರ ಹಾಗೂ ವರದಿಯನ್ನು ಹೈಕೋರ್ಟ್​ಗೆ ಸಲ್ಲಿಸಿ ಅನುಮತಿ ಸಿಕ್ಕ ನಂತರ ಸರ್ಕಾರದ ಅನುಮೋದನೆ ಪಡೆದು ನಂತರ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿನ ಉದ್ಯಮಗಳಿಗೆ ತೆರಿಗೆ ವಿನಾಯಿತಿ: ಪಂಕಜ್ ದೇವ್ ಪಾಂಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.