ಮೈಸೂರು : ನೆಲಸಮಗೊಳಿಸಲಾಗಿದ್ದ ಹುಚ್ಚಗಣಿ ಗ್ರಾಮದ ಶಕ್ತಿ ದೇವತೆ ಮಹದೇವಮ್ಮ ದೇವಸ್ಥಾನದ ಮರು ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದೆ. ಆದಿ ಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ ಹಾಗೂ ಕಾರ್ಯ ಸ್ವಾಮಿ ಗದ್ದುಗೆ ಶ್ರೀ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ದೇವಾಲಯದ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಿದ್ದಾರೆ.
ಈ ಹಿಂದೆ ದೇವಾಲಯವನ್ನು ತೆರವುಗೊಳಿಸಿದ್ದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಕೋಟ್ಯಂತರ ರೂ. ದೇಣಿಗೆಯನ್ನು ಸಂಗ್ರಹಿಸಿ ಹುಚ್ಚಗಣಿ ಗ್ರಾಮದ ಶಕ್ತಿ ದೇವತೆ ಮಹದೇವಮ್ಮ ದೇವಾಲಯವನ್ನು ಮರು ನಿರ್ಮಾಣ ಮಾಡುವ ಕಾರ್ಯಕ್ಕೆ ಗ್ರಾಮದ ಮುಖಂಡರು ಹಾಗೂ ಸ್ವಾಮೀಜಿಗಳು ಮುಂದಾಗಿದ್ದಾರೆ.
ಘಟನೆಯ ಹಿನ್ನೆಲೆ : ಈ ಹಿಂದೆ ಹುಚ್ಚಗಣಿ ಗ್ರಾಮದ ಶಕ್ತಿ ದೇವತೆ ಮಹಾದೇವಮ್ಮ ದೇವಸ್ಥಾನವನ್ನು ತೆರವುಗೊಳಿಸಿದ ಬೆನ್ನಲ್ಲೇ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದಕ್ಕೆ ಪ್ರತಿಯಾಗಿ ಅಂದಿನ ನಂಜನಗೂಡು ತಹಶೀಲ್ದಾರ್ ಮೋಹನ್ ಕುಮಾರಿ ಅವರನ್ನು ಅಮಾನತು ಮಾಡಲಾಗಿತ್ತು. ಈ ದೇವಾಲಯ ತೆರವು ವಿಚಾರ ಆಡಳಿತ ಸರ್ಕಾರವನ್ನೂ ಕೂಡ ಮುಜುಗರಕ್ಕೀಡು ಮಾಡಿತ್ತು.
ಈ ಬಗ್ಗೆ ಹಿಂದೂ ದೇವಾಲಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ, ಈ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದರು. ಸದ್ಯ ಹುಚ್ಚಗಣಿ ದೇವಾಲಯದ ಮರುನಿರ್ಮಾಣ ಕಾರ್ಯ ಆರಂಭವಾಗಿದೆ.
ಓದಿ : ಉತ್ತರ ಕನ್ನಡ : ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಜನ ಜೀವನ ಅಸ್ತವ್ಯಸ್ತ