ಮೈಸೂರು: ನಾಡಿನೆಲ್ಲೆಡೆ ಮಹಾ ಶಿವರಾತ್ರಿ ಸಂಭ್ರಮ ಮನೆ ಮಾಡಿದ್ದು, ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಯಲ್ಲಿ ಮಹಾಶಿವರಾತ್ರಿ ಕಳೆಗಟ್ಟಿದೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜನಗೂಡು ಶ್ರೀಕಂಠೇಶ್ವರ ದೇಗುಲದಲ್ಲಿ, ಮಹಾಶಿವರಾತ್ರಿ ನಿಮಿತ್ತ ಇಂದು ಮುಂಜಾನೆಯಿಂದ ಪೂಜಾ ಕೈಂಕರ್ಯಗಳು, ದೇವರಿಗೆ ಕ್ಷೀರಾಭೀಷೇಕ, ಫಲ ಪಂಚಾಮೃತಾಭಿಷೇಕ, ರುದ್ರಾಭಿಷೇಕಗಳು ನಡೆದವು.
ನಂಜುಂಡೇಶ್ವರನ ದರ್ಶನಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸುತ್ತಿರುವುದರಿಂದ, ಕೆಲ ಭಕ್ತರು ದೇವಸ್ಥಾನದ ಹೊರಭಾಗದಲ್ಲಿಯೇ ನಮಿಸಿ ಹೋಗುತ್ತಿದ್ದಾರೆ. ಕಪಿಲಾ ನದಿ ತೀರದಲ್ಲಿ ಭಕ್ತರು ತುಂಬಿ ತುಳುಕುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸರು ನಿಯೋಜಿಸಲಾಗಿದೆ. ನಂಜನಗೂಡಿನ ದೇವಸ್ಥಾನದ ಮುಂಭಾಗ ಶಿವರಾತ್ರಿಯ ಜಾಗರಣೆ ನಿಮಿತ್ತ ರಾತ್ರಿಯಿಡೀ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.
ಓದಿ :ಮಹಾಶಿವರಾತ್ರಿ: ಕೇದಾರನಾಥ ದೇವಾಲಯದ ಬಾಗಿಲು ತೆರೆಯುವ ದಿನಾಂಕ ಘೋಷಣೆ