ಮೈಸೂರು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ 80 ದಿನಗಳ ಬಳಿಕ ಮುಡಿ ಹರಕೆ ತೀರಿಸಲು ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಹರಕೆ ತೀರಿಸಲು ಭಕ್ತರು ಸಾಲುಗಟ್ಟಿ ನಿಂತಿದ್ದಾರೆ.
ಇಂದಿನಿಂದ ಅನ್ಲಾಕ್ ಮತ್ತಷ್ಟು ಸಡಿಲಿಕೆ ಮಾಡಿರುವುದರಿಂದ ಧಾರ್ಮಿಕ ಸ್ಥಳಗಳಿಗೆ ಭಕ್ತಾದಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಅಂತೆಯೇ ನಂಜನಗೂಡು ನಂಜುಂಡೇಶ್ವರನ ದರ್ಶನ ಪಡೆಯಲು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ಕೊರೊನಾ ಎರಡನೇ ಅಲೆ ಕಡಿಮೆಯಾಗುತ್ತಿದ್ದಂತೆ ಸರ್ಕಾರ ದೇವಾಲಯಗಳ ಬಾಗಿಲು ತೆರೆಯಲು ಅವಕಾಶ ಕಲ್ಪಿಸಿತ್ತು. ಆದರೆ, ಮುಡಿ ಹರಕೆಗೆ ಅವಕಾಶ ನೀಡಿರಲಿಲ್ಲ. ಇಂದಿನಿಂದ ಮುಡಿ ಹರಕೆಗೆ ಅವಕಾಶ ನೀಡಿರುವುದರಿಂದ ಹರಕೆ ತೀರಿಸಲು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತಿದ್ದಾರೆ.
ಇದನ್ನೂ ಓದಿ: ಧರ್ಮ ಸಾಮರಸ್ಯದಲ್ಲಿ ಅರಳಿತು ದೇವಾಲಯ: ಕರಾವಳಿಯಲ್ಲಿ 'ಸಿದ್ಧಿ'ಸಿತು ಕೋಮು ಸೌಹಾರ್ದತೆ