ಮೈಸೂರು: ಗ್ರಾಮ ಪಂಚಾಯತ್ ಚುನಾವಣಾಗೆ ದುಡ್ಡ ಕೊಡಲಿಲ್ಲವೆಂದು ಪತ್ನಿಯನ್ನು ಪತಿ ಸೀಮೆಎಣ್ಣೆ ಸುರಿದು ಸುಟ್ಟು ಹಾಕಿದ ಘಟನೆ ತಿ.ನರಸೀಪುರ ತಾಲೂಕಿನ ದೊಡ್ಡಮುಲಗೂಡು ಗ್ರಾಮದಲ್ಲಿ ನಡೆದಿದೆ.
ತಿ.ನರಸೀಪುರ ತಾಲೂಕಿನ ದೊಡ್ಡಮುಲಗೂಡು ಗ್ರಾಮ ಪಂಚಾಯತ್ ಸದಸ್ಯ ರಮೇಶ್ (30) ಪತ್ನಿ ಶಾಂತಮ್ಮಳನ್ನು (22) ಸೀಮೆಎಣ್ಣೆ ಸುರಿದು ಸುಟ್ಟು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಆರೋಪಿ ತಲೆಮರೆಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಬನ್ನೂರು ಪೊಲೀಸರು ಶೋಧ ಕಾರ್ಯ ಪ್ರಾರಂಭಿಸಿದ್ದಾರೆ.