ETV Bharat / city

ನಾಳೆ ಅನಗತ್ಯವಾಗಿ ಓಡಾಡುವವರ ವಿರುದ್ಧ ಸೂಕ್ತ ಕ್ರಮ: ಮೈಸೂರು ನಗರ ಪೊಲೀಸ್​ ಆಯುಕ್ತ - Dr. Chandragupta reaction about tomorrow lock down

ಪ್ರತಿ ಭಾನುವಾರ ಸಂಪೂರ್ಣ ಲಾಕ್​ಡೌನ್ ಆದೇಶ ಜಾರಿ ಮಾಡಿದ ಹಿನ್ನೆಲೆ ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಮೈಸೂರು ಜಿಲ್ಲೆಯನ್ನು ಸಂಪೂರ್ಣ ಲಾಕ್​ಡೌನ್ ಮಾಡಲಾಗುತ್ತಿದ್ದು, ಅನಗತ್ಯವಾಗಿ ಓಡಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಎಚ್ಚರಿಕೆ ನೀಡಿದ್ದಾರೆ.

ಡಾ.ಚಂದ್ರಗುಪ್ತ
ಡಾ.ಚಂದ್ರಗುಪ್ತ
author img

By

Published : May 23, 2020, 3:49 PM IST

ಮೈಸೂರು: 4ನೇ ಹಂತದ ಲಾಕ್​​ಡೌನ್ ಈಗಾಗಲೇ ವಿಸ್ತರಣೆಯಾಗಿದ್ದು, ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದ ಚಟುವಟಿಕೆಗಳನ್ನು ಬಂದ್ ಮಾಡಲಾಗುವುದು ಎಂದು ಮೈಸೂರು ನಗರ ಪೊಲೀಸ್​ ಆಯುಕ್ತ ಡಾ. ಚಂದ್ರಗುಪ್ತ ತಿಳಿಸಿದ್ದಾರೆ.

ಪ್ರತಿ ಭಾನುವಾರ ಸಂಪೂರ್ಣ ಲಾಕ್​ಡೌನ್ ಆದೇಶ ಜಾರಿ ಮಾಡಿದ ಹಿನ್ನೆಲೆ ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಜಿಲ್ಲೆಯನ್ನು ಸಂಪೂರ್ಣ ಲಾಕ್​ಡೌನ್ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಅಗತ್ಯ ಸೇವೆಗಳಾದ ವೈದ್ಯಕೀಯ, ಮೆಡಿಕಲ್ ಶಾಪ್, ದಿನಸಿ ಅಂಗಡಿಗಳನ್ನು ಬಿಟ್ಟು ಉಳಿದ ಮದ್ಯದ ಅಂಗಡಿಗಳು, ಅನಗತ್ಯ ವಾಹನ‌ ಸಂಚಾರ ಯಾವುದಕ್ಕೂ ಅನುಮತಿ ಇರುವುದಿಲ್ಲ. ಭಾನುವಾರ ಸಂಪೂರ್ಣ ಲಾಕ್​ಡೌನ್ ಇರುವ ಹಿನ್ನೆಲೆಯಲ್ಲಿ ಒಟ್ಟು 36 ಗಂಟೆಗಳ ಕಾಲ ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅನಗತ್ಯವಾಗಿ ಓಡಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.