ಮೈಸೂರು: ಆಹಾರ ಹುಡುಕಿಕೊಂಡು ಕಾಡಿನಿಂದ ನಾಡಿಗೆ ಬಂದ ಕಾಡಾನೆಯೊಂದು ತೋಟಕ್ಕೆ ಹಾಕಿದ್ದ ವಿದ್ಯುತ್ ತಂತಿಗೆ ಸಿಲುಕಿ ಅಸ್ವಸ್ಥಗೊಂಡಿದ್ದು, ಅರಣ್ಯ ಇಲಾಖೆ ನೀಡಿದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕಿನ ಗುರುಪುರ ಗ್ರಾಮದ ಬಳಿ ನಡೆದಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಹಳ್ಳಿ ಅರಣ್ಯ ವ್ಯಾಪ್ತಿಯ ಕಾಡಿನಿಂದ ಸಲಗವೊಂದು ಗುರುಪುರ ಗ್ರಾಮದ ಬಳಿಯ ಜಗದೀಶ್ ಎನ್ನುವವರ ತೋಟಕ್ಕೆ ನುಗ್ಗಿತ್ತು. ಶನಿವಾರ ಆ ತೋಟದಲ್ಲೇ ಸಲಗ ಕುಸಿದು ಬಿದ್ದಿತ್ತು. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ವೈದ್ಯರಿಂದ ರಾತ್ರಿ ಚಿಕಿತ್ಸೆ ನೀಡಿದರೂ ಪ್ರಯೋಜನವಾಗದೆ ಮೃತಪಟ್ಟಿದೆ.
ಇನ್ನು ಸ್ಥಳಕ್ಕೆ ಮೈಸೂರು ಪ್ರಾದೇಶಿಕ ವಿಭಾಗದ ಡಿಸಿಎಫ್ ಪ್ರಶಾಂತ್, ಇನ್ನಿತರ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ನಾಗರಹೊಳೆ ಪಶುವೈದ್ಯ ಡಾ. ಮುಜೀಬ್ ರೆಹಮಾನ್ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.