ಮೈಸೂರು: ಕಾರು ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಇನ್ನಿಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮೈಸೂರು ತಾಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಮಂಗಳವಾರ ತಡರಾತ್ರಿ ಕಾರು ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿದ್ದು, ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಮೌಳೇಶ್ವರ ರೆಡ್ಡಿ, ಸುಹಾನ್, ತೇಜಸ್ ಹಾಗೂ ಶುಭಂಕರ ಎಂಬುವವರು ಕಾರಿನಲ್ಲಿದ್ದರು.
ಕಾರಿನಲ್ಲಿ ಮೈಸೂರಿನ ಕಡೆಗೆ ಬರುತ್ತಿದ್ದಾಗ ಬಿಳಿಕೆರೆ ಬಳಿಯ ರಾಮೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಈ ಘಟನೆಯಿಂದ ಕಾರಿನಲ್ಲಿದ್ದ ಮೌಳೇಶ್ವರ ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ತೇಜಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಈ ವಿದ್ಯಾರ್ಥಿಗಳು ಮೂಲತಃ ಶಿವಮೊಗ್ಗ, ಬೆಂಗಳೂರು, ಹಾಗೂ ಅರಸೀಕೆರೆಗೆ ಸೇರಿದವರಾಗಿದ್ದಾರೆ ಎಂದು ತಿಳಿದುಬಂದಿದೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ವಿದ್ಯಾರ್ಥಿಗಳ ಮೃತದೇಹವನ್ನು ಕೆ.ಆರ್. ಆಸ್ಪತ್ರೆಗೆ ಕಳುಹಿಸಲಾಗಿದ್ದು, ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ನಗರದ ಡಿಆರ್ಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ವಿದ್ಯಾರ್ಥಿಗಳು ಮತ್ತು ಯುವಕರ ನಡುವೆ ಗಲಾಟೆ : ಮಾರಕಾಸ್ತ್ರ ಹಿಡಿದು ಬಂದ ಯುವಕ.. ವಿಡಿಯೋ