ಮೈಸೂರು: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಒಂದೇ ಹೋಟೆಲ್ನಲ್ಲಿ ಬ್ರೇಕ್ ಫಾಸ್ಟ್ ಮಾಡಿ, ಉಭಯ ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ.
ಇಂದು ಮೂರನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಪೂಜೆಗೆ ತೆರಳಲು ಬಂದಿದ್ದ ಕೆ.ಎಸ್.ಈಶ್ವರಪ್ಪ ಅವರು ಟಿಫನ್ಗೆ ಅಂತಾ ಹೋಟೆಲ್ವೊಂದಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಅದೇ ಹೋಟೆಲ್ನಲ್ಲಿದ್ದ ನಟ ಶಿವರಾಜ್ ಕುಮಾರ್, ಈಶ್ವರಪ್ಪ ಬಳಿ ತೆರಳಿ ಯೋಗಕ್ಷೇಮ ವಿಚಾರಿಸಿದರು.
ಈ ಹಿಂದೆ ಶಿವರಾಜ್ ಕುಮಾರ್, ಪತ್ನಿ ಗೀತಾರನ್ನ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಕಣಕ್ಕಿಳಿಸಿದ್ದನ್ನು ನೆನಪಿಸಿಕೊಳ್ಳಬಹುದು.
ಇದನ್ನೂ ಓದಿ: 'ರಿಯಲ್ ಹೀರೋ' Sonu Sood ಗೆ ಹುಟ್ಟುಹಬ್ಬದ ಸಂಭ್ರಮ