ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಸತ್ಯನಾರಾಯಣ (74) ಗುರುವಾರ ರಾತ್ರಿ 10 ಗಂಟೆಗೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. 2008ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿದ್ದ ಸತ್ಯನಾರಾಯಣ ಅವರು ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. 2013 ರಲ್ಲಿ ಜಿ.ಟಿ.ದೇವೇಗೌಡ ವಿರುದ್ಧ ಸೋಲು ಅನುಭವಿಸಿದ್ದ ಇವರು 2018 ರಲ್ಲಿ ಚಾಮುಂಡೇಶ್ವರಿ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಟ್ಟುಕೊಟ್ಟಿದ್ದರು.
ಸೌಮ್ಯ ಸ್ವಭಾವದ ರಾಜಕಾರಣಿ ಎಂದು ಹೆಸರವಾಸಿಯಾಗಿದ್ದ ಸತ್ಯಪ್ಪ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಿ.ಟಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ