ಮೈಸೂರು: 150 ಕೋಟಿ ರೂ. ವೆಚ್ಚದಲ್ಲಿ ಮೈಸೂರಿನಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನವನ್ನು ಆಧುನೀಕರಣಗೊಳಿಸಲು ಯೋಜನೆ ರೂಪಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಹೇಳಿದರು.
ವಸ್ತು ಪ್ರದರ್ಶನದಲ್ಲಿರುವ ಕಾವೇರಿ ಕಲಾ ಗ್ಯಾಲರಿ ವೀಕ್ಷಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಸ್ತು ಪ್ರದರ್ಶನವನ್ನು ಪ್ರತಿ ವರ್ಷ ಪ್ರೇಕ್ಷಣೀಯ ಸ್ಥಳವಾಗಿ ಮಾಡುತ್ತೇವೆ.ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದಿದ್ದೇನೆ ಎಂದು ತಿಳಿಸಿದರು.
ಕೆಆರ್ಎಸ್ ನಲ್ಲಿರುವ ಬೃಂದಾವನ ಗಾರ್ಡನ್ ಆಧುನೀಕರಣಗೊಳಿಸಲು ನಿರ್ಧರಿಸಲಾಗಿದೆ. ಕಾವೇರಿ ನದಿಯ ಉದ್ದಗಲಕ್ಕೂ ಇರುವಂತಹ ಕರ್ನಾಟಕ ಹಾಗೂ ತಮಿಳುನಾಡಿನ ಪ್ರವಾಸಿ ತಾಣಗಳ ಸಂಪೂರ್ಣ ಚಿತ್ರಣ ಕಾವೇರಿ ಕಲಾ ಗ್ಯಾಲರಿಯಲ್ಲಿದೆ. ಇದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಂದ ಉದ್ಘಾಟನೆ ಮಾಡಿಸಲಾಗುತ್ತದೆ ಎಂದರು.