ETV Bharat / city

ರಾಜವಂಶಸ್ಥ ಯದುವೀರ್ ಒಡೆಯರ್ ಹೆಸರಿನಲ್ಲಿ ನಕಲಿ ಟ್ವೀಟ್​ ಖಾತೆ!

ನಕಲಿ ಟ್ವೀಟ್ ಖಾತೆ ಬಗ್ಗೆ ಸ್ಪಷ್ಟಪಡಿಸಿರುವ ರಾಜವಂಶಸ್ಥ ಯದುವೀರ್ ಒಡೆಯರ್, ರೈತರಿಗೆ ಸಮಸ್ಯೆಗಳು ಎದುರಾದಾಗ ಅದನ್ನು ಬಗೆಹರಿಸುವುದು ಸರ್ಕಾರದ ಮಟ್ಟದಲ್ಲಿ ಆಗುವಂತಹದ್ದು. ಈ ವಿಚಾರದಲ್ಲಿ ನನ್ನ ಹೆಸರಿನ ನಕಲಿ ಖಾತೆ ತೆಗೆದು ಟ್ವೀಟ್ ಮಾಡುವುದು ಸರಿಯಲ್ಲ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

fake-tweet-account-in-the-name-of-yadavir-wodeyar
ರಾಜವಂಶಸ್ಥ ಯದುವೀರ್ ಒಡೆಯರ್
author img

By

Published : Feb 5, 2021, 12:19 PM IST

ಮೈಸೂರು: ಟ್ವಿಟರ್​ನಲ್ಲಿ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರ ಹೆಸರಿನಲ್ಲಿ ನಕಲಿ ಖಾತೆಯೊಂದು ಸೃಷ್ಟಿಯಾಗಿದ್ದು, ಈ ನಕಲಿ ಖಾತೆ ಮೂಲಕ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಲಾಗಿದೆ.

fake-tweet-account-in-the-name-of-yadavir-wodeyar
ರಾಜವಂಶಸ್ಥ ಯದುವೀರ್ ಒಡೆಯರ್ ಹೆಸರಿನಲ್ಲಿ ನಕಲಿ ಟ್ವೀಟ್​ ಖಾತೆ!

ರೈತರ ಸಮಸ್ಯೆ ಬಗೆಹರಿಸುವುದು ನಮ್ಮ ನೈತಿಕ ಬಾಧ್ಯತೆ. ಆತ್ಮೀಯ ನರೇಂದ್ರ ಮೋದಿಯವರೇ ರೈತರ ಸಮಸ್ಯೆ ಬಗೆಹರಿಸಿ ಎಂದು ಯದುವೀರ್ ಹೆಸರಿನಲ್ಲಿ ನಕಲಿ ಟ್ವೀಟ್ ಮಾಡಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳಾಗುತ್ತಿವೆ.

ಓದಿ: ಹಂಗಾಮಿ ಸಭಾಪತಿಯಾಗಿ ಕಾರ್ಯ ನಿರ್ವಹಿಸಲಿರುವ ಎಂ ಕೆ ಪ್ರಾಣೇಶ್

ಈ ಕುರಿತು ಈಟಿವಿ ಭಾರತದೊಂದಿಗೆ ದೂರವಾಣಿ ಕರೆ ಮೂಲಕ ಸ್ಪಷ್ಟಪಡಿಸಿರುವ ಯದುವೀರ್​, ರೈತರಿಗೆ ಸಮಸ್ಯೆಗಳು ಎದುರಾದಾಗ ಅದನ್ನು ಬಗೆಹರಿಸುವುದು ಸರ್ಕಾರದ ಮಟ್ಟದಲ್ಲಿ ಆಗುವಂತದ್ದು.

ಈ ವಿಚಾರದಲ್ಲಿ ನನ್ನ ಹೆಸರಿನ ನಕಲಿ ಖಾತೆ ತೆಗೆದು ಟ್ವೀಟ್ ಮಾಡುವುದು ಸರಿಯಲ್ಲ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ನಾನು ದೂರು ದಾಖಲಿಸಿದ್ದೇನೆ. ಪದೇ ಪದೆ ಈ ರೀತಿ ನಕಲಿ ಖಾತೆ ಸೃಷ್ಟಿ ಮಾಡಲಾಗುತ್ತಿದೆ. ಇದನ್ನು ಯಾರು ನಂಬಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.