ಮೈಸೂರು: ತಂಬಾಕು ಬೆಳೆಗೆ ಬೆಂಬಲ ಬೆಲೆ ಸಿಗದಿರುವುದರಿಂದ ಮನನೊಂದ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಡಿರುವ ಪಿರಿಯಾಪಟ್ಟಣ ತಾಲೂಕಿನ ಮಠದಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ನಾಗರಾಜೇಗೌಡ (49) ಮೃತ ರೈತ. ನಾಗರಾಜೇಗೌಡ ತಮ್ಮ ಒಂದು ಎಕರೆ ಜಮೀನಿನಲ್ಲಿ ತಂಬಾಕು ಬೆಳೆ ಬೆಳೆದಿದ್ದರು. ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗದಿರುವುದರಿಂದ ಮನನೊಂದು ಇಂದು ಮನೆಯಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಓದಿ: ವೈದ್ಯ ದಂಪತಿ ಮೇಲೆ ಹಲ್ಲೆ: ಚಿನ್ನಾಭರಣ ಕದ್ದು ಖದೀಮರು ಪರಾರಿ
ಇವರು ರಾವಂದೂರಿನ ಬ್ಯಾಂಕ್ ಆಫ್ ಬರೋಡಾದಲ್ಲಿ 8 ಲಕ್ಷ ರೂ. ಮತ್ತು 5 ಲಕ್ಷ ಕೈಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.