ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಉದ್ದೇಶಪೂರ್ವಕವಾಗಿ ಶಾಂತಿ ಭಂಗ ಮತ್ತು ಕ್ರಿಮಿನಲ್ ಬೆದರಿಕೆಯಂಥ ಗಂಭೀರ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ವರುಣಾ ಮಹೇಶ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.
ಅನಾಮಧೇಯ ವ್ಯಕ್ತಿಗಳೊಂದಿಗೆ ಸಂಪರ್ಕ ಹೊಂದಿರುವ ವಿದ್ಯಾಶಂಕರ್ ಅವರು ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಹಾಗಾಗಿ, ಅವರನ್ನು ವಿಚಾರಣೆಗೆ ಒಳಪಡಿಸಿ, ನನಗೆ ಸೂಕ್ತ ಭದ್ರತೆ ನೀಡಿ ಎಂದು ಕಾಂಗ್ರೆಸ್ ಮುಖಂಡ ವರುಣಾ ಮಹೇಶ್ ದೂರು ನೀಡಿದ್ದರು.
ಮಾಹಿತಿ ಹಕ್ಕು ಕಾಯ್ದೆ ಅಡಿ ಕೆಲವು ಮಾಹಿತಿಗಾಗಿ ಅರ್ಜಿ ಹಾಕಿದ್ದಕ್ಕೆ ತನಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ವರುಣ ಮಹೇಶ್ ತಿಳಿಸಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿಗೆ ಶಸ್ತ್ರಸಜ್ಜಿತ ಅಪ್‌ಗ್ರೇಡೆಡ್ ಕಾರು: ಬೆಲೆ, ವಿಶೇಷತೆ ಹೀಗಿದೆ..