ETV Bharat / city

ಪೊಲೀಸ್ ಕಸ್ಟಡಿಯಲ್ಲಿದ್ದ ‌ವ್ಯಕ್ತಿ ಸಾವು ಪ್ರಕರಣ: 8 ಮಂದಿ ವಿರುದ್ಧ ಎಫ್ಐಆರ್ - Mysore lockup death

ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವಿಗೆ ಸಂಬಂಧಿಸಿದಂತೆ ಯುವಕನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು 8 ಮಂದಿ ಮೇಲೆ ಎಫ್ಐಆರ್‌ ದಾಖಲಿಸಿದ್ದಾರೆ. ಈಗಾಗಲೇ ಮೂರು ಜನರನ್ನು ಪೊಲೀಸರು ಬಂಧಿಸಿದ್ದು, ಉಳಿದ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ.

fir-register-on-eight-people-in-mysore-lockup-death-case
ಪೊಲೀಸ್ ಕಸ್ಟಡಿಯಲ್ಲಿದ್ದ ‌ವ್ಯಕ್ತಿ ಸಾವು
author img

By

Published : Nov 30, 2021, 10:09 AM IST

ಮೈಸೂರು: ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವಿಗೆ ಸಂಬಂಧಿಸಿದಂತೆ ಯುವಕನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು 8 ಮಂದಿ ಮೇಲೆ ಮೇಲೆ ಎಫ್ಐಆರ್‌ ದಾಖಲಿಸಿದ್ದಾರೆ.

ಮೃತ ಸಿದ್ದರಾಜು ತಾಯಿ ಮಹದೇವಮ್ಮ ಭಾನುವಾರ ನೀಡಿರುವ ದೂರನ್ನು ಆಧರಿಸಿ ಪೊಲೀಸರು 8 ಮಂದಿ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ಈಗಾಗಲೇ ಮೂರು ಜನರನ್ನು ಪೊಲೀಸರು ಬಂಧಿಸಿದ್ದು, ಉಳಿದ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ.

ದೂರಿನಲ್ಲಿ ನನ್ನ ಮಗ ಸಿದ್ದರಾಜು ನಮ್ಮೂರಿನ ವಿವಾಹಿತೆಯೊಬ್ಬಳೊಂದಿಗೆ 5 ವರ್ಷಗಳ ಹಿಂದೆ ಅನೈತಿಕ ಸಂಬಂಧ ಹೊಂದಿದ್ದು, ಎರಡು ವರ್ಷಗಳ ಹಿಂದೆ ಸಂಬಂಧ ಕಡಿದುಕೊಂಡು ಮದ್ಯ ವ್ಯಸನಿಯಾಗಿದ್ದ.‌ ಗಾರೆ ಕೆಲಸದಿಂದ ದುಡಿದ ಹಣವನ್ನು ಕುಡಿತಕ್ಕೆ ಬಳಸುತ್ತಿದ್ದು, ಮಹಿಳೆ ಹಾಗೂ ನನ್ನ ಮಗನ ನಡುವೆ ಹಲವು ಬಾರಿ ಗಲಾಟೆ ನಡೆದು, ನಾಲ್ಕೈದು ಬಾರಿ ಠಾಣೆಗೂ ದೂರು ‌ನೀಡಲಾಗಿತ್ತು.

ನ.27 ರ ಸಂಜೆ 6:30ರ ಸುಮಾರಿನಲ್ಲಿ ಮಹಿಳೆ, ಆಕೆಯ ತಂದೆ, ತಾಯಿ ಸಹೋದರ, ನಾಲ್ವರು ಸಂಬಂಧಿಕರು ನನ್ನ ಮಗನ ಕೈಕಾಲು ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ. ನಂತರ 112 ಸಹಾಯವಾಣಿಗೆ ಕರೆ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ನಂಜನಗೂಡು ಪೊಲೀಸರು ಆತನನ್ನು ವಶಕ್ಕೆ ಪಡೆದು ಕರೆದುಕೊಂಡು ಹೋಗಿದ್ದರು. ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ನ.28 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮಧ್ಯಾಹ್ನ ಮೃತಪಟ್ಟ ಎಂಬ ವಿಚಾರ ತಿಳಿದು ಬಂದಿದೆ. ಮಗನ ಸಾವಿಗೆ ಕಾರಣರಾದವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿದ್ದಾರೆ.

ಎಫ್‌ಐಆರ್ ನಲ್ಲಿ ಅನುಮಾನ:

ಪೊಲೀಸರು ದಾಖಲಿಸಿರುವ ಎಫ್ಐಆರ್​​​ನಲ್ಲಿ ಸಿದ್ದರಾಜು ಕಸ್ಟಡಿಯಲ್ಲಿದ್ದ ಬಗ್ಗೆ ಉಲ್ಲೇಖವನ್ನೇ ಮಾಡಿಲ್ಲ. ಸಿದ್ದರಾಜುವನ್ನು ವಶಕ್ಕೆ ಪಡೆದ ಪೊಲೀಸರು ಆತ ಮದ್ಯ ಸೇವಿಸಿರುವ ಬಗ್ಗೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಂದ‌ ತಪಾಸಣೆ ನಡೆಸಿದ್ದಾರೆ. ಭಾನುವಾರ ಪೊಲೀಸರ ಕಸ್ಟಡಿಯಲ್ಲಿದ್ದ ಸಿದ್ದರಾಜು ಅಸ್ವಸ್ಥಗೊಂಡ ಕಾರಣ ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲಿ ಆತ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆದರೆ, ಎಫ್ಐಆರ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ನಮೂದಿಸಿದ್ದು, ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಸಿದ್ದರಾಜು ಮರಣೋತ್ತರ ಪರೀಕ್ಷೆ ನಡೆಸಿ, ಶವವನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು. ನಂಜನಗೂಡು ಜೆಎಂಎಫ್ ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಗಣಪತಿ ಎಂ.ಪ್ರಶಾಂತ್ ಶವಾಗಾರಕ್ಕೆ ಭೇಟಿ ನೀಡಿ ಪೊಲೀಸರಿಂದ ಮಾಹಿತಿ ಪಡೆದರು. ಸಿದ್ದರಾಜು ಅಂತ್ಯಸಂಸ್ಕಾರ ಸ್ವಗ್ರಾಮದಲ್ಲಿ ನಡೆಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.